Advertisement

ಉಗ್ರ ದಾಳಿ ಭೀತಿ: ಅವಳಿ ನಗರದಲ್ಲೂ ಕಟ್ಟೆಚ್ಚರ

09:58 AM Aug 17, 2019 | Suhan S |

ಹುಬ್ಬಳ್ಳಿ: ಪಾಕಿಸ್ತಾನದ ಉಗ್ರರು ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಪ್ರಮುಖ ನಗರಗಳ ಮೇಲೂ ದಾಳಿ ಮಾಡಬಹುದು ಎಂಬ ಗುಪ್ತಚರ ಮಾಹಿತಿ ಮೇರೆಗೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ನಗರದಾದ್ಯಂತ ಹೈ ಅಲರ್ಟ್‌ ಘೋಷಿಸಲಾಗಿದೆ.

Advertisement

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಕಾಶ್ಮೀರದ ವಿಷಯವಾಗಿ ಪಾಕಿಸ್ತಾನದ ಉಗ್ರರು ಫೆಬ್ರವರಿಯಲ್ಲಿ ಪುಲ್ವಾಮಾದಲ್ಲಿ ಮಾಡಿದ್ದ ಆತ್ಮಾಹುತಿ ದಾಳಿ ರೀತಿಯಲ್ಲೇ ಮತ್ತೆ ದಾಳಿಗಳನ್ನು ಮಾಡುವ ಸಾಧ್ಯತೆಗಳಿವೆ. ಆ ನಿಟ್ಟಿನಲ್ಲಿ ಸಂಚು ರೂಪಿಸಿದ್ದಾರೆ. ಈಗಾಗಲೇ ರಾಜ್ಯಕ್ಕೂ ಕೆಲ ಭಯೋತ್ಪಾದಕರು ನುಸುಳಿದ್ದಾರೆ ಎಂಬ ಮಾಹಿತಿ ಮೇರೆಗೆ ರಾಜ್ಯದ ಬಹುತೇಕ ಪ್ರಮುಖ ನಗರ ಹಾಗೂ ಪ್ರಮುಖ ಕಟ್ಟಡ, ಸ್ಥಳಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸರು ನಗರ ಪ್ರವೇಶಿಸುವ ಪ್ರತಿಯೊಂದು ವಾಹನಗಳನ್ನು ತಪಾಸಿಸುತ್ತಿದ್ದಾರೆ. ಸಂಶಯ ಕಂಡುಬಂದವರ ಮೇಲೆ ತೀವ್ರ ನಿಗಾವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ನಗರದಾದ್ಯಂತ ಕಟ್ಟೆಚ್ಚರ: ಹು-ಧಾ ಪೊಲೀಸ್‌ ಆಯುಕ್ತರು ನಗರದಾದ್ಯಂತ ಕಟ್ಟೆಚ್ಚರ ಘೋಷಿಸಿದ್ದಾರೆ. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್‌ ಸ್ಟ್ಯಾಂಡ್‌, ಮಾಲ್ಗಳು, ಜನನಿಬಿಡ ಪ್ರದೇಶ ಸೇರಿದಂತೆ ಆಯಕಟ್ಟಿನ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್‌ ಭದ್ರತಾ ಪಡೆ ನಿಯೋಜಿಸಲಾಗಿದೆ ಎಂದು ಹು-ಧಾ ಪೊಲೀಸ್‌ ಆಯುಕ್ತ ಎಂ.ಎನ್‌. ನಾಗರಾಜ ‘ಉದಯವಾಣಿ’ಗೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next