ಶ್ರೀನಗರ : ಅಲ್ ಹುದಾ ಎಜುಕೇಷನಲ್ ಟ್ರಸ್ಟ್‌ನಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದಂತೆ ನಿಧಿ ಸಂಗ್ರಹಿಸಲಾಗುತ್ತಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ ಜಮ್ಮು ಕಾಶ್ಮೀರದ ಹಲವು ಕಡೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದೆ.
ಅಲ್ ಹುದಾ ಎಜುಕೇಷನಲ್ ಟ್ರಸ್ಟ್ ಶಿಕ್ಷಣ ಸಂಸ್ಥೆಗಳ ಮೇಲೆ ತಂಡ ದಾಳಿ ನಡೆಸಿದ್ದು, ಅದರಂತೆ ಜಮ್ಮು ಕಾಶ್ಮೀರದ ರಜೌರಿ, ಪೂಂಚ್, ಜಮ್ಮು, ಶ್ರೀನಗರ, ಪುಲ್ವಾಮಾ, ಬುದ್ಗಾಮ್, ಶೋಪಿಯಾನ್ ಮತ್ತು ಬಂಡಿಪೋರಾ ಸ್ಥಳಗಳು ಸೇರಿ ಒಟ್ಟು ಎಂಟು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಎನ್ಐಎ ಮೂಲಗಳು ತಿಳಿಸಿವೆ.
ಶೋಧ ಕಾರ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್‌ಪಿಎಫ್) ಸಮನ್ವಯದಲ್ಲಿ ಈ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ಈ ಶೋಧ ಕಾರ್ಯಾಚರಣೆಯು ರಾಜೌರಿ ಜಿಲ್ಲೆಯ ಅಲ್ ಹುದಾ ಎಜುಕೇಷನಲ್ ಟ್ರಸ್ಟ್‌ನ ಅನುಮಾನಾಸ್ಪದ ಚಟುವಟಿಕೆಗಳಿಗೆ ಸಂಬಂಧಿಸಿದೆ ಎಂದು ಎನ್ಐಎ ಮೂಲಗಳು ತಿಳಿಸಿವೆ.
ಕಾನೂನುಬಾಹಿರ ಸಂಘ ಎಂದು ಘೋಷಿಸಲಾದ ಜಮಾತ್-ಎ-ಇಸ್ಲಾಮಿ ಮತ್ತು ಅಲ್ ಹುದಾ ಎಜುಕೇಷನಲ್ ಟ್ರಸ್ಟ್‌ನ ಹಣಕಾಸಿನ ಚಟುವಟಿಕೆಗಳ ಬಗ್ಗೆ ಎನ್‌ಐಎ ಸ್ವಯಂ ಪ್ರೇರಿತವಾಗಿ ಕೇಸು ದಾಖಲಿಸಿಕೊಂಡು ದಾಳಿ ನಡೆಸಿದೆ.
ಇದನ್ನೂ ಓದಿ : ಸೇತುವೆಗೆ ಢಿಕ್ಕಿ ಹೊಡೆದ ಕಾರು: ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರು ಸ್ಥಳದಲ್ಲೇ ಸಾವು