ಶ್ರೀನಗರ: ಭಯೋತ್ಪಾದನೆಗೆ ಹಣ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ ಜಮ್ಮು & ಕಾಶ್ಮೀರದ ವಿವಿಧೆಡೆ ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ.
ದೇಶದಲ್ಲಿ ಭಯೋತ್ಪಾದನ ಕೃತ್ಯಗಳನ್ನು ಎಸೆಗಲು ಹಣ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಎನ್ ಐಎ ಅಧಿಕಾರಿಗಳು ಹಲವೆಡೆ ಹಣದ ಮೂಲವನ್ನು ಹುಡುಕುವ ನಿಟ್ಟಿನಲ್ಲಿ ದಾಳಿ ನಡೆಸಿದ್ದಾರೆ. ಮಂಗಳವಾರ ( ಮಾ. 14 ರಂದು) ಜಮ್ಮು & ಕಾಶ್ಮೀರದ ವಿವಿಧೆಡೆ ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ.
ಕುಲ್ಗಾಮ್, ಪುಲ್ವಾಮಾ, ಅನಂತನಾಗ್ ಮತ್ತು ಶೋಪಿಯಾನ್ ಪ್ರದೇಶಗಳಲ್ಲಿ ಶಂಕಿತರ ನಿವಾಸಕ್ಕೆ ದಾಳಿ ನಡೆಸಿ ತನಿಖೆ ನಡೆಸಿದ್ದಾರೆ.
ಭಯೋತ್ಪಾದನೆ ನಿಧಿಗೆ ಸಂಬಂಧಿಸಿದಂತೆ ಹುರಿಯತ್ ನಾಯಕ ಖಾಜಿ ಯಾಸಿರ್ ಮತ್ತು ಜಮ್ಮು ಮತ್ತು ಕಾಶ್ಮೀರ ಸಾಲ್ವೇಶನ್ ಮೂವ್‌ಮೆಂಟ್ ಅಧ್ಯಕ್ಷ ಜಾಫರ್ ಭಟ್ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ವರದಿ ತಿಳಿಸಿದೆ.