ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಎನ್‌ಐಎ ಬಳಿ ಉದ್ಯಮಿ ವಿರುದ್ಧದ ಆರೋಪಗಳಿಗೆ ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ನ್ಯಾ.ಎ.ಎಂ. ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ ಮಂಗಳವಾರ ಅಭಿಪ್ರಾಯಪಟ್ಟಿದೆ. ದೆಹಲಿ ಹೈಕೋರ್ಟ್ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಎನ್‌ಐಎ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಹುರಿಯತ್ ಕಾನ್ಫರೆನ್ಸ್ ನಾಯಕರು ಮತ್ತು ಭಯೋತ್ಪಾದನಾ ಸಂಘಟನೆಗಳ ನಡುವೆ ಲಿಂಕ್ ಇರುವುದರ ಬಗ್ಗೆಯೂ ಸಾಕ್ಷ್ಯಗಳಿವೆ ಎಂದು ಸುಪ್ರೀಂಕೋರ್ಟ್‌ಗೆ ತನಿಖಾ ಸಂಸ್ಥೆ ಮನವರಿಕೆ ಮಾಡಿ ಕೊಟ್ಟಿದೆ.
Advertisement