Advertisement

ಸ್ವಾತಂತ್ರ್ಯ ದಿನಕ್ಕೆ ಒಂದು ದಿನ ಮೊದಲು ಪಂಜಾಬ್ ನಲ್ಲಿ ನಾಲ್ವರು ಉಗ್ರರ ಬಂಧನ

04:07 PM Aug 14, 2022 | Team Udayavani |

ಚಂಡೀಗಢ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದ ವೇಳೆ ಉಗ್ರ ಕೃತ್ಯಕ್ಕೆ ತಯಾರಿ ನಡೆಸಿದ್ದ ನಾಲ್ವರು ಪಾಕ್ ಬೆಂಬಲಿತ ಉಗ್ರರನ್ನು ಬಂಧಿಸಲಾಗಿದೆ.

Advertisement

ಪಾಕಿಸ್ತಾನ ಮೂಲದ ಐಎಸ್‌ಐ ಬೆಂಬಲಿತ ಭಯೋತ್ಪಾದನಾ ಘಟಕವೊಂದನ್ನು ದೆಹಲಿ ಪೊಲೀಸರ ಸಹಾಯದಿಂದ ಪಂಜಾಬ್‌ ನಲ್ಲಿ ಪತ್ತೆ ಮಾಡಲಾಗಿದೆ ಎಂದು ಪಂಜಾಬ್ ಪೊಲೀಸರು ಮಾಹಿತಿ ನೀಡಿದ್ದಾರೆ.

ವರದಿಗಳ ಪ್ರಕಾರ, ಕೆನಡಾ ಮೂಲದ ಅರ್ಶ್ ದಲ್ಲಾ ಮತ್ತು ಆಸ್ಟ್ರೇಲಿಯಾ ಮೂಲದ ಗುರ್ಜಂತ್ ಸಿಂಗ್‌ಗೆ ಸಂಬಂಧಿಸಿದ ನಾಲ್ವರು ಸದಸ್ಯರನ್ನು ಬಂಧಿಸಲಾಗಿದೆ.

ಪಂಜಾಬ್ ಪೊಲೀಸರು ಮೂರು ಹ್ಯಾಂಡ್ ಗ್ರೆನೇಡ್‌ಗಳು, ಒಂದು ಸುಧಾರಿತ ಸ್ಫೋಟಕ ಸಾಧನ (ಐಇಡಿ), ಎರಡು 9 ಎಂಎಂ ಪಿಸ್ತೂಲ್‌ಗಳು ಮತ್ತು 40 ಲೈವ್ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ತಿಳಿಸಿದ್ದಾರೆ.

ಇದನ್ನೂ ಓದಿ:ನಾವು ಪ್ರವಾಸ ಆರಂಭಿಸಿದರೆ ಕಾಂಗ್ರೆಸ್‌ ಗೆ ಬಿಜೆಪಿ ಶಕ್ತಿ ಅರಿವಾಗಲಿದೆ: ಯಡಿಯೂರಪ್ಪ

Advertisement

ಸ್ವಾತಂತ್ರ್ಯ ದಿನದ ಹಿನ್ನೆಲೆಯಲ್ಲಿ ಪಂಜಾಬ್ ನಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಇದೇ ವೇಳೆ ಉತ್ತರ ಪ್ರದೇಶದ ಉಗ್ರ ನಿಗ್ರಹ ದಳದ ಅಧಿಕಾರಿಗಳು ಕಾನ್ಪುರದಲ್ಲಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರನನ್ನು ಸೆರೆ ಹಿಡಿದಿದ್ದಾರೆ. ಈತನನ್ನು ಹಬಿಬುಲ್ ಇಸ್ಲಾಂ ಯಾನೆ ಸೈಫುಲ್ಲಾ ಎಂದು ಗುರುತಿಸಲಾಗಿದೆ. 19 ವರ್ಷದ ಸೈಫಲ್ಲಾ ಗಡಿಯಾಚೆಗಿನ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿರಲು ಟೆಲಿಗ್ರಾಮ್, ಫೇಸ್‌ಬುಕ್ ಮೆಸೆಂಜರ್ ಮತ್ತು ವಾಟ್ಸಾಪ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next