ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಉತ್ತೇಜನ ನೀಡುವವರನ್ನು ಮಟ್ಟಹಾಕುವ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಕ್ರಮ ಬಿರುಸಾಗಿದೆ. ಬುಧವಾರ ಪಾಕಿಸ್ತಾನ ಮೂಲದ ನಿಷೇಧಿತ ಭಯೋತ್ಪಾದಕ ಸಂಘಟನೆ ಜತೆಗೆ ನಂಟುಹೊಂದಿರುವ ಮೂವರು ಆರೋಪಿಗಳ ಆಸ್ತಿಯನ್ನು ಎನ್‌ಐಎ ಜಪ್ತಿಮಾಡಿದೆ.
ಹಿಜ್ಬುಲ್ ಮುಜಾಹಿದೀನ್ ಹಾಗೂ ಜೈಶ್-ಎ-ಮೊಹಮ್ಮದ್ ಉಗ್ರಸಂಘಟನೆಗಳು ನಡೆಸಿರುವ 2 ಭಯೋತ್ಪಾದಕ ಕೃತ್ಯಗಳಿಗೆ ಸಂಬಂಧಿಸಿದ ಮೂವರು ಆರೋಪಿಗಳಾದ ದೌಲತ್ ಅಲಿ ಮುಘಲ್, ಇಶಾಖ್ ಪಾಲ್, ಫಯಾಜ್ ಅಹ್ಮದ್‌ಗೆ ಸಂಬಂಧಿಸಿದ ಆಸ್ತಿಗಳು ಹಾಗೂ ಸ್ಥಳಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆರೋಪಿಗಳ ನಿವಾಸಗಳಲ್ಲೂ ಶೋಧ ಕಾರ್ಯಾಚರಣೆ ನಡೆಸಿ, ಕಾನೂನು ಬಾಹಿರ ತಡೆ ಕಾಯ್ದೆ ಅನ್ವಯ ಆರೋಪಿಗಳಿಗೆ ಸಂಬಂಧಿಸಿದ ಕಟ್ಟಡಗಳು, ಆಸ್ತಿಪಾಸ್ತಿಯನ್ನು ಜಪ್ತಿ ಮಾಡಲಾಗಿದೆ.