ನವದೆಹಲಿ:ಕೇಂದ್ರಾಡಳಿತ ಪ್ರದೇಶ ಎಂದು ಘೋಷಣೆಯಾದ ಬಳಿಕ ಲಡಾಖ್ ನಲ್ಲಿ ಭಯೋತ್ಪಾದನೆ ಇಳಿಮುಖವಾಗಿದೆ ಎಂದು ಮೂರು ದಿನಗಳ ಕಾಲ ಲಡಾಖ್ ಪ್ರದೇಶಕ್ಕೆ ಭೇಟಿ ನೀಡಿರುವ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ತಿಳಿಸಿದ್ದಾರೆ.
ಇದನ್ನೂ ಓದಿ:ಪಿಆರ್‌ಕೆ ಬ್ಯಾನರ್‌ನಲ್ಲಿ ಮ್ಯಾನ್ ಆಫ್ ದಿ ಮ್ಯಾಚ್
ಕೇಂದ್ರಾಡಳಿತ ಪ್ರದೇಶವಾದ ನಂತರ ಲಡಾಖ್ ನಲ್ಲಿ ಭಯೋತ್ಪಾದನೆ ಕಡಿಮೆಯಾಗಿದೆ. ಇಲ್ಲಿ ಸೇನೆ, ಅರೆಸೇನಾ ಪಡೆ ಮತ್ತು ಸ್ಥಳೀಯ ಪೊಲೀಸರಲ್ಲಿ ಪರಸ್ಪರ ಹೊಂದಾಣಿಕೆ ಇದೆ ಎಂದರು, ಅಲ್ಲದೇ ಇಲ್ಲಿ ಭಯೋತ್ಪಾದನೆ ಪ್ರಮಾಣ ಕಡಿಮೆಯಾಗಿದೆ ಎನ್ನುವುದಕ್ಕೆ ನಮ್ಮಲ್ಲಿ ಅಂಕಿಅಂಶಗಳಿವೆ ಎಂದು ಸಿಂಗ್ ಹೇಳಿದರು.
ಜಮ್ಮು-ಕಾಶ್ಮೀರ ಮತ್ತು ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿದ ನಂತರ ಇದೊಂದು ಪ್ರಧಾನಮಂತ್ರಿಯವರ
ರಾಜಕೀಯ ಪಟ್ಟಭದ್ರ ಹಿತಾಸಕ್ತಿ ಎಂದು ಅನುಮಾನಿಸಿದ್ದರು. ಆದರೆ ಈ ಎರಡೂ ಕೇಂದ್ರಾಡಳಿತ ಪ್ರದೇಶದಲ್ಲಿ ರಾಜಕೀಯ ಪ್ರಕ್ರಿಯೆ
ಆರಂಭವಾಗಬೇಕು ಎಂಬುದು ಪ್ರಧಾನಿ ಮೋದಿಯವರ ಆಶಯವಾಗಿದೆ ಎಂದು ತಿಳಿಸಿದರು.
ರಾಜ್ ನಾಥ್ ಸಿಂಗ್ ಅವರು ಜಮ್ಮು-ಕಾಶ್ಮೀರದ ರಾಜಕೀಯ ಮುಖಂಡರ ಜತೆ ಮಾತುಕತೆ ನಡೆಸಿದ್ದು, ಶೀಘ್ರದಲ್ಲಿಯೇ ಲಡಾಖ್ ನಾಯಕರ ಜತೆ ಮಾತನಾಡುವುದಾಗಿ ಈ ಸಂದರ್ಭದಲ್ಲಿ ಹೇಳಿದರು.