Advertisement

ಮೋದಿ ಸರ್ಕಾರದಿಂದ ಭಯೋತ್ಪಾದನೆ ನಿಗ್ರಹ : ದುಷ್ಯಂತ್‌ ಕುಮಾರ್‌ ಗೌತಮ್

05:44 PM Aug 25, 2021 | Team Udayavani |

ಮಂಡ್ಯ : ಕಾಂಗ್ರೆಸ್‌ನ ಯುಪಿಎ ಸರ್ಕಾರದಲ್ಲಿ ಖಜಾನೆ ಖಾಲಿಯಾಗಿತ್ತು. ಭಯೋತ್ಪಾದನೆ ಹೆಚ್ಚಾಗಿತ್ತು. ಆದರೆ ಕಳೆದ 7 ವರ್ಷಗಳಲ್ಲಿ ಪ್ರಧಾನಿ ನರೇಂದ್ರಮೋದಿ ಸರ್ಕಾರ ಖಜಾನೆ ತುಂಬಿಸುವ ಮೂಲಕ ಆರ್ಥಿಕತೆ ಸುಧಾರಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ದುಷ್ಯಂತ್‌ ಕುಮಾರ್ ಗೌತಮ್ ಹೇಳಿದ್ದಾರೆ.

Advertisement

ನಗರದ ಸುಮರವಿ ಸಮುದಾಯಭವನದಲ್ಲಿ ನಡೆದ ಬಿಜೆಪಿ ರಾಜ್ಯ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಇದನ್ನೂ ಓದಿ : ಬೌದ್ಧಿಕವಾಗಿ ಕಾಂಗ್ರೆಸ್ ಸಂಪೂರ್ಣ ದಿವಾಳಿಯಾಗಿದೆ : ನಳೀನ್‌ ಕುಮಾರ್ ಕಟೀಲ್

ಯುಪಿಎ ಸರ್ಕಾರದಲ್ಲಿ ಪ್ರಧಾನಿಯಾಗಿದ್ದ ಮನಮೋಹನ್‌ಸಿಂಗ್ ಆಡಳಿತಾವಧಿಯಲ್ಲಿ ದೇಶದ ಆರ್ಥಿಕತೆ ಕುಸಿದಿತ್ತು. ಭಯೋತ್ಪಾದನೆ ಹೆಚ್ಚಾಗಿತ್ತು. ಆದರೆ ಈಗ ಮೋದಿ ಅವರು ಆರ್ಥಿಕತೆಯನ್ನು ತಹಬದಿಗೆ ತಂದಿದ್ದು, ಭಯೋತ್ಪಾದನೆ ಇಲ್ಲದಂತಾಗಿದೆ ಎಂದು ತಿಳಿಸಿದ್ದಾರೆ.

ಕ್ರಾಂತಿಕಾರಕ ಕೆಲಸ

Advertisement

ಕೊರೊನಾ ಸಂಕಷ್ಟದಲ್ಲಿ ನಮ್ಮ ಬಿಜೆಪಿ ಸರ್ಕಾರ ಕ್ರಾಂತಿಕಾರಕ ಕೆಲಸ ಮಾಡಿದೆ. ದೇಶದಲ್ಲಿನ ಬಿಜೆಪಿ ಕಾರ್ಯಕರ್ತರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಕೆಲಸ ಮಾಡಿದ್ದಾರೆ. ಶವಸಂಸ್ಕಾರ ಮಾಡಲು ಯಾರೂ ಮುಂದೆ ಬಾರದಿದ್ದಾಗ ನಮ್ಮ ಕಾರ್ಯಕರ್ತರು ಶವ ಸಂಸ್ಕಾರ ಮಾಡಿದ್ದಾರೆ ಎಂದಿದ್ದಾರೆ.

ಕೊರೊನಾ ಸಂಕಷ್ಟ ಯಶಸ್ವಿಯಾಗಿ ನಿರ್ವಹಣೆ

ಕಾಂಗ್ರೆಸ್ ಸರ್ಕಾರದಿಂದ ಖಜಾನೆ ಖಾಲಿಯಾಗಿದ್ದರಿಂದ ಪಿಪಿಇ ಕಿಟ್ ಖರೀದಿಸಲು ಸರ್ಕಾರದಲ್ಲಿ ಹಣ ಇರಲಿಲ್ಲ. ಅಂಥ ಸಂದರ್ಭದಲ್ಲಿ ಮೋದಿ ಅವರು ತೆಗೆದುಕೊಂಡ ನಿರ್ಧಾರಗಳಿಂದ ಕೊರೊನಾ ಸಂಕಷ್ಟವನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ವಿಶ್ವದಾದ್ಯಂತ 56 ಕೋಟಿ ವ್ಯಾಕ್ಸಿನೇಷನ್ ನೀಡಲಾಗಿದೆ. ಭಾರತದಲ್ಲಿ ಉಚಿತವಾಗಿ 2 ಡೋಸ್ ಲಸಿಕೆ ನೀಡಲಾಗಿದೆ. ಕೊರೊನಾ ನಿಭಾಯಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದರು.

ಕಾಂಗ್ರೆಸ್‌ ನದ್ದು ತಾಲಿಬಾನಿ ಸಂಸ್ಕೃತಿ

ಕಾಂಗ್ರೆಸ್‌ ನದ್ದು ತಾಲಿಬಾನಿ ಸಂಸ್ಕೃತಿಯಾಗಿದೆ. ತಾಲಿಬಾನಿಗಳನ್ನು ಪೋಷಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಅಫ್ಘಾನಿಸ್ತಾನದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಪರಿಸ್ಥಿತಿಯಲ್ಲೂ ವಿಶ್ವಸಂಸ್ಥೆಯ ಅಧ್ಯಕ್ಷ ಸ್ಥಾನವನ್ನು ಭಾರತಕ್ಕೆ ಸಿಕ್ಕಿದ್ದು. ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರುವ ಕೆಲಸ ಮಾಡಲಾಗುತ್ತಿದೆ. ದೇಶದಲ್ಲಿ ದೊಡ್ಡ ಪರಿವರ್ತನೆ ಮಾಡಲು ಮೋದಿ ಅವರು ಮುಂದಾಗಿದ್ದಾರೆ. ಅಂತ್ಯೋದಯ ರೀತಿಯಲ್ಲಿ ಬಡತನ ನಿರ್ಮೂಲನೆ ಮಾಡಲು ಕ್ರಮ ವಹಿಸಲಾಗಿದೆ. ಕರ್ನಾಟಕದಲ್ಲಿಯೂ ಬಿಜೆಪಿ ಸರ್ಕಾರ ಕ್ರಾಂತಿಕಾರಕ ನಿರ್ಧಾರಗಳನ್ನು ತೆಗೆದುಕೊಂಡು ಕೆಲಸ ನಿರ್ವಹಿಸುತ್ತಿದೆ ಎಂದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್, ಸಚಿವ ಕೆ.ಸಿ.ನಾರಾಯಣ ಗೌಡ, ರಾಜ್ಯ ಕಾರ್ಯದರ್ಶಿ ಅರುಣ್‌ಕುಮಾರ್, ಜಿಲ್ಲಾಧ್ಯಕ್ಷ ಕೆ.ಜೆ.ವಿಜಯಕುಮಾರ್ ಇದ್ದರು.

ಇದನ್ನೂ ಓದಿ : ತಮಿಳುನಾಡಿನಿಂದ ಬರುವವರೆಗೂ ನೆಗೆಟಿವ್‌ ವರದಿ ಕಡ್ಡಾಯ

Advertisement

Udayavani is now on Telegram. Click here to join our channel and stay updated with the latest news.

Next