Advertisement

ಪುಲ್ವಾಮಾದಲ್ಲಿ ಭಯೋತ್ಪಾದಕರ ಗುಂಡಿನ ದಾಳಿ:  ಸಿಆರ್ ಪಿಎಆಫ್ ಯೋಧ ಹುತಾತ್ಮ

04:13 PM Jul 17, 2022 | Team Udayavani |

ಶ್ರೀನಗರ: ಪೊಲೀಸರು ಮತ್ತು ಸಿಆರ್‌ಪಿಎಫ್‌ನ ಜಂಟಿ ಚೆಕ್‌ಪೋಸ್ಟ್ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಓರ್ವ ಸಿಆರ್ಪಿಎಫ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ.

Advertisement

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗೊಂಗೂ ಕ್ರಾಸಿಂಗ್ ಬಳಿ ದಾಳಿ ನಡೆದಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಹಾಯಕ ಸಬ್ ಇನ್ಸ್‌ಪೆಕ್ಟರ್ ಉಗ್ರ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

ಸಮೀಪದ ಸೇಬಿನ ತೋಟದಿಂದ ಚೆಕ್‌ಪೋಸ್ಟ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದು, ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ:ಅಂತಿಮ ಏಕದಿನ: ಗಾಯಗೊಂಡ ಬುಮ್ರಾ ಪಂದ್ಯದಿಂದ ಹೊರಕ್ಕೆ; ಟಾಸ್ ಗೆದ್ದ ಭಾರತ

ಗಾಯಗೊಂಡ ಅಧಿಕಾರಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆತ ಹುತಾತ್ಮರಾಗಿದ್ದಾನೆ. ಪ್ರದೇಶವನ್ನು ಸುತ್ತುವರಿದಿದ್ದು, ಉಗ್ರರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next