Advertisement
ಘಟನೆಯಲ್ಲಿ ಸಿಐಎಸ್‌ಎಫ್‌ನ ಒಬ್ಬ ಎಎಸ್‌ಐ ಪ್ರಾಣ ಕಳೆದುಕೊಂಡಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Related Articles
Advertisement
ಇಂದು ಮುಂಜಾನೆ ಜಮ್ಮುವಿನಲ್ಲಿರುವ ಸೇನಾ ನೆಲೆಯ ಬಳಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭೀಕರ ಗುಂಡಿನ ಕಾಳಗ ನಡೆದಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಭದ್ರತಾ ಅಧಿಕಾರಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ನಗರದ ಸುಂಜ್ವಾನ್ ಕಂಟೋನ್ಮೆಂಟ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮುಂಜಾನೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಎನ್‌ಕೌಂಟರ್ ಪ್ರಾರಂಭವಾಯಿತು. ನಗರದಲ್ಲಿ ಭಯೋತ್ಪಾದಕರು ದಾಳಿ ನಡೆಸಲು ಮುಂದಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೋದಿ ಭೇಟಿ ಮುನ್ನ ದಾಳಿ: ಮುಂದಿನ ರವಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಬಳಿಕ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಪಲ್ಲಿ ಗ್ರಾಮದಲ್ಲಿ ಸಾವಿರಾರು ಪಂಚಾಯತ್ ಸದಸ್ಯರು ಭಾಗವಹಿಸುವ ಪ್ರಮುಖ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಆದರೆ ಮೋದಿ ಭೇಟಿಗೆ ಎರಡು ಮೊದಲು ಮಿಲಿಟರಿ ಕ್ಯಾಂಪ್ ಬಳಿ ಈ ಘಟನೆ ನಡೆದಿದೆ.