Advertisement

ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿ ಸಿಆರ್ ಪಿಎಫ್ ಯೋಧ ಹುತಾತ್ಮ, ಸೇನೆಯಿಂದ ಪ್ರತಿದಾಳಿ

10:31 AM Apr 08, 2020 | Nagendra Trasi |

ನವದೆಹಲಿ: ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಕಾರ್ಯನಿರತ ಸೈನಿಕರ ಮೇಳೆ ಉಗ್ರರು ಗ್ರನೇಡ್ ದಾಳಿ ನಡೆಸಿದ ಪರಿಣಾಮ ಸಿಆರ್ ಪಿಎಫ್ ಯೋಧ ಹುತಾತ್ಮರಾಗಿದ್ದು, ಮತ್ತೊಬ್ಬ ಯೋಧ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ ಎಂದು ವರದಿ ತಿಳಿಸಿದೆ.

Advertisement

ಸೇನಾ ಮೂಲಗಳ ಪ್ರಕಾರ, ಮಂಗಳವಾರ ಸಂಜೆ ಬಿಜ್ ಬೇಹ್ರಾದ ಗೋರಿವಾನ್ ಚೌಕ್ ಸಮೀಪ ಶಂಕಿತ ಉಗ್ರರು ಗ್ರೆನೇಡ್ ಎಸೆದ ಪರಿಣಾಮ ಹೆಡ್ ಕಾನ್ಸ್ ಟೇಬಲ್ ಶಿವ್ ಲಾಲ್ ನೀಟಾಂ ಹುತಾತ್ಮರಾಗಿರುವುದಾಗಿ ವರದಿ ವಿವರಿಸಿದೆ.

ಗ್ರೆನೇಡ್ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೀಟಾಮ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಾರಣಾಂತಿಕವಾಗಿ ಗಾಯಗೊಂಡಿದ್ದರಿಂದ ಅನಂತ್ ನಾಗ್ ನಗರದಲ್ಲಿರುವ ಆಸ್ಪತ್ರೆಗೆ ಕೊಂಡೊಯ್ಯುವಂತೆ ವೈದ್ಯರು ಸಲಹೆ ನೀಡಿದ್ದರು. ಆದರೆ ಆಸ್ಪತ್ರೆಗೆ ಕರೆದೊಯ್ದ ನಂತರ ನೀಟಾಮ್ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಸೇನೆ ಕಾರ್ಯಾಚರಣೆ ನಡೆಸಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಕೂಂಬಿಂಗ್ ನಡೆಸಿದರೂ ಉಗ್ರರು ಅಲ್ಲಿಂದ ಪರಾರಿಯಾಗಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next