Advertisement

ಕುಲ್‌ಗಾಂ:ಸೇನಾ ನೆಲೆಯ ಮೇಲೆ ಉಗ್ರರ ದಾಳಿ;ನಾಗರಿಕನಿಗೆ ಗಾಯ

11:56 AM Nov 22, 2018 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್‌ಗಾಂನಲ್ಲಿರುವ ಸೇನಾ ನೆಲೆಯ ಮೇಲೆ ಶನಿವಾರ ಬೆಳಗ್ಗೆ ಉಗ್ರರು ದಾಳಿ ನಡೆಸಿ ಅಟ್ಟಹಾಸ ಮೆರೆದಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ನಾಗರಿಕ ಗಂಭೀರವಾಗಿ ಗಾಯಗೊಂಡಿದ್ದಾರೆ. 

Advertisement

ಖುದ್ವಾನಿ ಪ್ರದೇಶದಲ್ಲಿರುವ ಕ್ಯಾಂಪ್‌ ಮೇಲೆ ಗುಂಡಿನ ದಾಳಿ ನಡೆಸಾಗಿದ್ದು, ಕ್ಯಾಂಪ್‌ ಬಳಿಯಿದ್ದ ನಾಗರಿಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳದಿಂದ ಉಗ್ರರು ಪರಾರಿಯಾಗುವಲ್ಲಿ  ಯಶಸ್ವಿಯಾಗಿದ್ದಾರೆ.ಭಾರೀ ಸಂಖ್ಯೆಯಲ್ಲಿ ಭದ್ರತಾ ಪಡೆಗಳು ಸ್ಥಳಕ್ಕಾಮಿಸಿ ಉಗ್ರರಿಗಾಗಿ ಶೋಧ ನಡೆಸುತ್ತಿದ್ದಾರೆ. 

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next