Advertisement

ಗಸ್ತು ತಿರುಗುತಿದ್ದ ಯೋಧರ ಮೇಲೆ ಉಗ್ರ ದಾಳಿ: ಓರ್ವ ಯೋಧ, ನಾಗರಿಕ ಹುತಾತ್ಮ, ಇಬ್ಬರಿಗೆ ಗಾಯ

04:53 PM Jul 01, 2020 | keerthan |

ಶ್ರೀನಗರ: ಜಮ್ಮು ಕಾಶ್ಮೀರದ ಸೋಪೋರ್ ನಲ್ಲಿ ಗಸ್ತು ತಿರುಗುತ್ತಿದ್ದ ಸಿಆರ್ ಪಿಎಫ್ ಜವಾನರ ಮೇಲೆ ಉಗ್ರರು ದಾಳಿ ನಡೆಸಿದ್ದು, ಓರ್ವ ಸಿಆರ್ ಪಿಎಫ್ ಯೋಧ ಮತ್ತು ಓರ್ವ ನಾಗರಿಕ ಮೃತಪಟ್ಟಿದ್ದಾರೆ. ಇಬ್ಬರು ಯೋಧರು ಗಾಯಗೊಂಡ ಘಟನೆ ಬುಧವಾರ ಮುಂಜಾನೆ ನಡೆದಿದೆ.

Advertisement

ಪ್ರಾಥಮಿಕ ಮಾಹಿತಿಯ ಪ್ರಕಾರ, ಗಸ್ತು ತಿರುಗುತ್ತಿದ್ದ ಯೋಧರು, ಗಸ್ತು ಮುಗಿಸಿ ವಾಹನದಲ್ಲಿ ತೆರಳುತ್ತಿದ್ದರು. ಆ ಸಮಯದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಮೂವರು ಸಿಆರ್ ಪಿಎಫ್ ಜವಾನರು ಮತ್ತು ಓರ್ವ ನಾಗರಿಕ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಲಾದರೂ, ಓರ್ವ ಯೋಧ ಮತ್ತು ಓರ್ವ ನಾಗರಿಕ ಮರಣ ಹೊಂದಿದ್ದಾರೆ.

ಸೋಪೋರ್ ನ ಮೊಡೆಲ್ ಪಟ್ಟಣದಲ್ಲಿ ಈ ದಾಳಿ ನಡೆದಿದೆ. ಕೂಡಲೇ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದಿದ್ದು, ಅಡಗಿರುವ ಉಗ್ರರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ಡಿಜಿಪಿಯಾಗಿರುವ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.

ಗಾಯಗೊಂಡಿರುವ ಇನ್ನಿಬ್ಬರು ಯೋಧರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next