ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಸೋಪೋರೆಯಲ್ಲಿ ಭಯೋತ್ಪಾದಕರು ಹಾಡಹಗಲೇ ಗ್ರೆನೇಡ್ ದಾಳಿ ನಡೆಸಿದ ಪರಿಣಾಮ 20 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಶ್ರೀನಗರದ ಕಾರನ್ನಗರ್ ಪ್ರದೇಶದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಆರು ಮಂದಿ ಭದ್ರತಾ ಸಿಬ್ಬಂದಿಗಳು ಗಾಯಗೊಂಡಿರುವ ಘಟನೆ ನಡೆದಿತ್ತು.
ಪೊಲೀಸರ ಮಾಹಿತಿ ಪ್ರಕಾರ, ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ಪ್ರದೇಶಕ್ಕೆ ಯುರೋಪಿಯನ್ ಸಂಸದೀಯ ನಿಯೋಗ ಭೇಟಿ ನೀಡುವ ಮುನ್ನ ದಿನವೇ ಉಗ್ರರು ಈ ಕೃತ್ಯ ಎಸಗಿದ್ದಾರೆ ಎಂದು ವರದಿ ತಿಳಿಸಿದೆ.
*ಬಸ್ ನಿಲ್ದಾಣದ ಮೇಲೆ ಗ್ರೆನೇಡ್ ದಾಳಿ 20 ಮಂದಿ ಪ್ರಯಾಣಿಕರಿಗೆ ಗಾಯ
*ಗಾಯಗೊಂಡವರಲ್ಲಿ ಆರು ಮಂದಿ ಪ್ರಯಾಣಿಕರು ಶ್ರೀನಗರ್ ಆಸ್ಪತ್ರೆಗೆ ರವಾನೆ
*ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರಿದಿದ್ದು ಉಗ್ರರ ವಿರುದ್ಧ ಕೂಂಬಿಂಗ್ ಕಾರ್ಯಾಚರಣೆ ಆರಂಭ