ಬೆಂಗಳೂರು: ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರ ಹುದ್ದೆಗೆ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪರೀಕ್ಷಾ ಕೇಂದ್ರ ಬದಲಾವಣೆಯ ಮನವಿ ಸ್ವೀಕರಿಸುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಭ್ಯರ್ಥಿಗಳಿಗೆ ಸೂಚಿಸಿದೆ.
ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿರುವ ಪರೀಕ್ಷಾ ಕೇಂದ್ರಕ್ಕೂ, ಪ್ರಾಧಿಕಾರದಿಂದ ನೀಡಿರುವ ಕೇಂದ್ರಕ್ಕೂ ಸಾಕಷ್ಟು ವ್ಯತ್ಯಾಸ ಇತ್ತು.ಮಂಗಳೂರು, ಬೆಂಗಳೂರು, ಮೈಸೂರು ಸೇರಿ ಆಯಾ ಜಿಲ್ಲೆಯ ಪರೀಕ್ಷಾ ಕೇಂದ್ರ ಆಯ್ಕೆ ಮಾಡಿಕೊಂಡವರಲ್ಲಿ ಕೆಲವರಿಗೆ ಪರೀಕ್ಷಾ ಕೇಂದ್ರವೇ ಬದಲಾಗಿದೆ. ಇದನ್ನು ಸರಿಪಡಿಸುವಂತೆ ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಆದರೆ, ಪ್ರಾಧಿಕಾರದಿಂದ ಪರೀಕ್ಷಾ ಕೇಂದ್ರ ಬದಲಾಯಿಸಲು ಸಾಧ್ಯವಿಲ್ಲ ಎಂದು ಖಡಕ್ ಉತ್ತರ ರವಾನಿಸಲಾಗಿದೆ. ಅಭ್ಯರ್ಥಿಗಳ ಪರೀಕ್ಷಾ ಕೇಂದ್ರ ಬದಲಾವಣೆಗೆ ಸಲ್ಲಿಸುವ ಮನವಿ ಪರಿಗಣಿಸುವುದಿಲ್ಲ.
ಕೇವಲ ವಿಶೇಷ ಸಂದರ್ಭದಲ್ಲಿ ಮಾತ್ರ ವೈದ್ಯಕೀಯ ಕಾರಣಗಳಿಗೆ ಪರೀಕ್ಷಾ ಕೇಂದ್ರ ಬದಲಿಸಬಹುದಾಗಿದೆ. ಅಂತಹ ಅಭ್ಯರ್ಥಿಗಳು ದೃಢೀಕೃತ ವೈದ್ಯಕೀಯ ದಾಖಲೆಗಳೊಂದಿಗೆ ನ.7ರೊಳಗೆ ಖುದ್ದಾಗಿ ಪ್ರಾಧಿಕಾರಕ್ಕೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಉಪನ್ಯಾಸಕರ ನೇಮಕಾತಿ ಸಂಬಂಧ ಅ.26ರಂದು ಪ್ರಕಟಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿನ ಮಾಹಿತಿಗೆ ಸಲ್ಲಿಕೆಯಾದ
ಆಕ್ಷೇಪಣೆಗಳನ್ನು ಪರಿಗಣಿಸಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿ ದವರ ಪರಿಷ್ಕೃತ ಪಟ್ಟಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಪರಿಷ್ಕೃತ ಪಟ್ಟಿಯಲ್ಲಿ ಅಭ್ಯರ್ಥಿಯು ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿದ್ದರೂ ಹೆಸರು ನಮೂದಿತವಾಗಿಲ್ಲದಿದ್ದರೇ ಅಂತಹ ಅಭ್ಯರ್ಥಿಗಳು ಎಲ್ಲ ದಾಖಲೆಗ ಳೊಂದಿಗೆ ನ.7ರೊಳಗೆ ಪ್ರಾಧಿಕಾರಕ್ಕೆ ಖುದ್ದಾಗಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮಾಹಿತಿಗಾಗಿ ವೆಬ್ ಸೈಟ್
//kea.kar.nic.in/ ಗೆ ಭೇಟಿ ನೀಡಬಹುದಾಗಿದೆ.