ನವದೆಹಲಿ; ಜಗತ್ತಿನ ವಿವಿಧ ದೇಶಗಳಲ್ಲಿ ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್ ಮತ್ತು ಥಾಯ್ ಲ್ಯಾಂಡ್ ನಿಂದ ಭಾರತಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ಪರೀಕ್ಷೆ ಕಡ್ಡಾಯ ಎಂದು ಕೇಂದ್ರ ಸರ್ಕಾರ ಶನಿವಾರ (ಡಿಸೆಂಬರ್ 24) ತಿಳಿಸಿದೆ.
ಇದನ್ನೂ ಓದಿ:ಕ್ರಿಸ್ಮಸ್ ಮುನ್ನಾದಿನ ಚರ್ಚ್ ನೊಳಗೆ ಎರಡು ಗುಂಪುಗಳ ಮಾರಾಮಾರಿ
ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ ಈ ಕುರಿತು ಮಾಹಿತಿ ನೀಡಿದ್ದು, ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಲಿದ್ದು, ಒಂದು ವೇಳೆ ಪಾಸಿಟಿವ್ ವರದಿ ಬಂದರೆ ಅಂತಹ ಪ್ರಯಾಣಿಕರು ಕ್ವಾರಂಟೈನ್ ನಲ್ಲಿ ಇರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಕೋವಿಡ್ ನ ಬಿಎಫ್ ನೂತನ ಹೊಸ ತಳಿ ಹರಡದಂತೆ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತುಂಬಾ ಕಾಳಜಿಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಮಾಂಡವಿಯಾ ಹೇಳಿದರು. ವೈರಸ್ ಆರ್ ಎನ್ ಎ ಪ್ರಕರಣ ದೆಹಲಿ ಮತ್ತು ಮುಂಬೈಯಲ್ಲಿ ಪತ್ತೆಯಾಗಿದ್ದು, ಅದರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಕೋವಿಡ್ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಜನರು ಮಾಸ್ಕ್ ಧರಿಸಬೇಕು, ಜನಜಂಗುಳಿಯನ್ನು ನಿಯಂತ್ರಿಸಬೇಕು, ಜೊತೆಗೆ ಕೋವಿಡ್ ನಿಯಮ ಪಾಲಿಸಬೇಕು ಎಂದು ಮಾಂಡವಿಯಾ ಎಎನ್ ಐಗೆ ತಿಳಿಸಿದ್ದಾರೆ.