Advertisement

ಟೆಸ್ಟ್‌ ಶ್ರೇಯಾಂಕ: ನಂ.1ಸ್ಥಾನ ಕಾಯ್ದುಕೊಂಡ ಜಡೇಜಾ

05:35 AM Jul 20, 2017 | Team Udayavani |

ನವದೆಹಲಿ: ಭಾರತ ಆಲ್‌ರೌಂಡರ್‌ ರವೀಂದ್ರ ಜಡೇಜ ನೂತನವಾಗಿ ಪ್ರಕಟಗೊಂಡ ಟೆಸ್ಟ್‌ ಬೌಲಿಂಗ್‌ ಶ್ರೇಯಾಂಕದಲ್ಲಿ ನಂಬರ್‌ ಒನ್‌ ಸ್ಥಾನ ಕಾಯ್ದುಕೊಂಡಿದ್ದಾರೆ. ಭಾರತದ ಮತ್ತೂಬ್ಬ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿ‌ನ್‌ ನಂ.2ನೇ ಸ್ಥಾನದಿಂದ ನಂ.3ನೇ ಸ್ಥಾನಕ್ಕೆ ಕುಸಿದಿದ್ದಾರೆ. ನಂ.3ನೇ ಸ್ಥಾನದಲ್ಲಿದ್ದ ಶ್ರೀಲಂಕಾದ ರಂಗನಾಥ್‌ ಹೆರಾತ್‌ ನಂ.2ನೇ ಸ್ಥಾನಕ್ಕೆ ಜಿಗಿದಿದ್ದಾರೆ.

Advertisement

ಬ್ಯಾಟಿಂಗ್‌ ವಿಭಾಗದಲ್ಲಿ ಆಸ್ಟ್ರೇಲಿಯಾದ ಸ್ಟೀವನ್‌ ಸ್ಮಿತ್‌ ನಂ.1ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಇಂಗ್ಲೆಂಡ್‌ನ‌ ಜೋ ರೂಟ್‌ ನಂ.3ನೇ ಸ್ಥಾನದಿಂದ ನಂ.2ನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ನಂ.5ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಉಳಿದಂತೆ ತಂಡ ವಿಭಾಗದಲ್ಲಿ ಭಾರತ ನಂ.1ನೇ ಸ್ಥಾನ ಕಾಯ್ದುಕೊಂಡಿದೆ. ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್‌, ನ್ಯೂಜಿಲೆಂಡ್‌ ಕ್ರಮವಾಗಿ ನಂತರದ ಸ್ಥಾನದಲ್ಲಿವೆ.

Advertisement

Udayavani is now on Telegram. Click here to join our channel and stay updated with the latest news.

Next