ಸಿಡ್ನಿ: 2024 ಕೊನೆಗೊಳ್ಳುತ್ತಿದ್ದಂತೆ, ಕ್ರಿಕೆಟ್ ಆಸ್ಟ್ರೇಲಿಯಾ ವರ್ಷದ ಟೆಸ್ಟ್ ತಂಡ ಎಂದು ಹೆಸರಿಸಿದೆ. ತಂಡದಲ್ಲಿ ಇಂಗ್ಲೆಂಡ್ ನ ಮೂವರು, ಭಾರತ, ನ್ಯೂಜಿಲ್ಯಾಂಡ್ ಮತ್ತು ಆಸ್ಟ್ರೇಲಿಯಾದ ತಲಾ ಇಬ್ಬರು ಮತ್ತು ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾದಿಂದ ಒಬ್ಬ ಆಟಗಾರರಿದ್ದಾರೆ.
ಅಚ್ಚರಿಯ ನಡೆಯಲ್ಲಿ, ಕ್ರಿಕೆಟ್ ಆಸ್ಟ್ರೇಲಿಯಾ ಹೆಸರಿಸಿದ ತಂಡದಲ್ಲಿ ಆಸೀಸ್ ನಾಯಕ ಪ್ಯಾಟ್ ಕಮಿನ್ಸ್ ಅವರನ್ನು ಆಯ್ಕೆ ಮಾಡಿಲ್ಲ. ಕಳೆದ ತಿಂಗಳು ಆಸ್ಟ್ರೇಲಿಯಾ ವಿರುದ್ಧದ ಪರ್ತ್ ಟೆಸ್ಟ್‌ನಲ್ಲಿ ಭಾರತವನ್ನು ಗೆಲುವಿನತ್ತ ಮುನ್ನಡೆಸಿದ್ದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ತಂಡದ ನಾಯಕರನ್ನಾಗಿ ನೇಮಿಸಲಾಗಿದೆ.
ಜಸ್ಪ್ರೀತ್ ಬುಮ್ರಾ ಹೊರತಾಗಿ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರು ಆಸೀಸ್ ಪ್ರಕಟಿಸಿದ 2024ರ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದ ಮತ್ತೋರ್ವ ಭಾರತೀಯ ಆಟಗಾರ.
ಇಂಗ್ಲೆಂಡ್ ಬೆನ್ ಡಕೆಟ್, ಜೋ ರೂಟ್ ಮತ್ತು ಹ್ಯಾರಿ ಬ್ರೂಕ್ ಸ್ಥಾನ ಪಡೆದಿದ್ದರೆ, ನ್ಯೂಜಿಲ್ಯಾಂಡ್ ನ ರಚಿನ್ ರವೀಂದ್ರ ಮತ್ತು ಮ್ಯಾಟ್ ಹೆನ್ರಿ, ಶ್ರೀಲಂಕಾದ ಕಮಿಂದು ಮೆಂಡಿಸ್, ಆಸ್ಟ್ರೇಲಿಯಾದ ಅಲೆಕ್ಸ್ ಕ್ಯಾರಿ, ಮತ್ತು ಜೋಶ್ ಹ್ಯಾಜಲ್ವುಡ್ ಹಾಗೂ ದ.ಆಫ್ರಿಕಾದ ಕೇಶವ್ ಮಹಾರಾಜ ಆಸ್ಟ್ರೇಲಿಯಾದ ಟೆಸ್ಟ್ ತಂಡದಲ್ಲಿದ್ದಾರೆ.
2024ಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾದ ಟೆಸ್ಟ್ ತಂಡ
ಯಶಸ್ವಿ ಜೈಸ್ವಾಲ್, ಬೆನ್ ಡಕೆಟ್, ಜೋ ರೂಟ್, ರಚಿನ್ ರವೀಂದ್ರ, ಹ್ಯಾರಿ ಬ್ರೂಕ್, ಕಮಿಂದು ಮೆಂಡಿಸ್, ಅಲೆಕ್ಸ್ ಕ್ಯಾರಿ, ಮ್ಯಾಟ್ ಹೆನ್ರಿ, ಜಸ್ಪ್ರೀತ್ ಬುಮ್ರಾ (ನಾ), ಜೋಶ್ ಹ್ಯಾಜಲ್ವುಡ್, ಕೇಶವ್ ಮಹಾರಾಜ್.