ಸಾಗರ: ಮಕ್ಕಳಿಗೆ ಹೊರೆಯಾಗದಂತೆ ಕೆಲವು ನಿಯಮಗಳನ್ನು ಜಾರಿಗೆ ತರಲಾಗುತ್ತಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಠ್ಯಪುಸ್ತಕ ಪರಿಷ್ಕರಣೆ ಸಂದರ್ಭ ಸಹ ತಜ್ಞರ ಅಭಿಪ್ರಾಯ ಪಡೆಯಲಾಗಿದೆ. ಯಾವುದೇ ಪಕ್ಷದ ಪರ-ವಿರುದ್ಧವಿಲ್ಲದೆ, ಮಕ್ಕಳು ಏನನ್ನು ಓದಬೇಕು ಎನ್ನುವುದನ್ನು ಆಯಾ ಕ್ಷೇತ್ರದ ತಜ್ಞರ ಜತೆ ಸಮಾಲೋಚಿಸಿಯೇ ಪಠ್ಯದಲ್ಲಿ ಅಳವಡಿಸಲಾಗುತ್ತಿದೆ ಎಂದರು.
ಅತಿಯಾದ ಪುಸ್ತಕವನ್ನು ಮಕ್ಕಳು ಹೊತ್ತೂಯ್ಯುವುದನ್ನು ತಪ್ಪಿಸಲು ನಿಗ ದಿತ ಮಾನದಂಡ ಅನುಸರಿಸಲಾಗಿದೆ. ಶನಿವಾರ ಬ್ಯಾಗ್ ರಹಿತ ದಿನವನ್ನು ಜಾರಿಗೆ ತರಲಾಗಿದೆ. ರಾಜ್ಯದಲ್ಲಿ ಎಲ್ಲ ಮಕ್ಕಳಿಗೆ ಪಠ್ಯಪುಸ್ತಕವನ್ನು ನಿಗ ದಿತ ಅವ ಧಿಯಲ್ಲಿ ತಲುಪಿಸಲಾಗಿದೆ. ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಬಗ್ಗೆ ಕೆಲವು ಕಡೆಗಳಲ್ಲಿ ಸಮಸ್ಯೆ ಇದ್ದು ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಗಮನಹರಿಸಲಾಗಿದೆ. ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ಹುದ್ದೆಗೆ ಮಂಜೂರಾತಿ ಸಿಕ್ಕಿದ್ದು, ಸದ್ಯದಲ್ಲೇ 13,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದರು.
ಗ್ರಾಮೀಣ ಭಾಗದಲ್ಲಿ ಹಿಂದಿನ ಸರಕಾರ 1ರಿಂದ 8ನೇ ತರಗತಿ ಮಕ್ಕಳಿಗೆ ವಾರಕ್ಕೆ ಒಂದು ದಿನ ಮೊಟ್ಟೆ ಕೊಡುವ ತೀರ್ಮಾನ ತೆಗೆದುಕೊಂಡಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು 1ರಿಂದ 10ನೇ ತರಗತಿಯ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡಲು ಸೂಚಿಸಿದ್ದಾರೆ. ಮೊಟ್ಟೆ ಸೇವಿಸದವರಿಗೆ ಚಿಕ್ಕಿ ಮತ್ತು ಬಾಳೆಹಣ್ಣು ಕೊಡಲಾಗುತ್ತದೆ. ಸರಕಾರಿ ಶಾಲೆಯ ಸಮಗ್ರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹಣ ಇರಿಸಿದ್ದು ಅದನ್ನು ಶೀಘ್ರದಲ್ಲೇ ಅನುಷ್ಠಾನಕ್ಕೆ ತರಲಾಗುತ್ತದೆ ಎಂದು ತಿಳಿಸಿದರು.