Advertisement

ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ವರದಿ ಆಧರಿಸಿ ಕ್ರಮ: ಸಿಎಂ ಬೊಮ್ಮಾಯಿ

02:06 AM Jun 01, 2022 | Team Udayavani |

ಮಂಗಳೂರು / ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿ ಎಲ್ಲ ಆಯಾಮ ಗಳಿಂದಲೂ ಪರಿಶೀಲಿಸಿ ಶಿಕ್ಷಣ ಸಚಿವರು ವರದಿ ನೀಡಲಿದ್ದಾರೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Advertisement

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಂಗಳ ವಾರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಟೀಕೆಗಳಿಗೆ ಸಂಬಂಧಿಸಿ ಆದಿಚುಂಚನಗಿರಿ ಸ್ವಾಮೀಜಿಗಳನ್ನು ಭೇಟಿ ಮಾಡಿ ಸತ್ಯಾಂಶವನ್ನು ದಾಖಲೆ ಸಮೇತ ವಿವರಿಸುವುದಾಗಿ ಸಚಿವರು ತಿಳಿಸಿದ್ದು, ಅವರ ವರದಿ ಬಂದ ಅನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗು ವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಹೇಳಿದರು.

ನಮ್ಮ ಬರಹ ಬೇಡ: ಲೇಖಕರ ಒತ್ತಾಯ
ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಮತ್ತಷ್ಟು ತಾರಕಕ್ಕೆ ಏರಿದೆ. ಹೊಸ ಬೆಳವಣಿಗೆ ಯಲ್ಲಿ 9ನೇ ತರಗತಿ ಪಠ್ಯ ಪುಸ್ತಕ ರಚನೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪ್ರೊ| ಕೆ.ಎಸ್‌. ಮಧುಸೂದನ ರಾಜೀನಾಮೆ ನೀಡಿದ್ದಾರೆ.

ಹಿರಿಯ ಸಾಹಿತಿಗಳಾದ ಬೊಳುವಾರು ಮೊಹಮ್ಮದ್‌ ಕುಂಞ, ಲೇಖಕಿ ರೂಪಾ ಹಾಸನ ಸೇರಿದಂತೆ ಹಲವರು ಲೇಖಕರು ತಮ್ಮ ಬರಹಗಳನ್ನು ಸೇರ್ಪಡೆ ಮಾಡುವುದು ಬೇಡ ಎಂದು ಸರಕಾರಕ್ಕೆ ಮನವಿ ಮಾಡಿದ್ದಾರೆ.

Advertisement

ಮಳಲಿ ಮಸೀದಿ
ಉತ್ತರಪ್ರದೇಶದ ಜ್ಞಾನವಾಪಿ ಮಸೀದಿಯಂತೆ ಮಳಲಿ ಮಸೀದಿಯ ಸರ್ವೇ ಆಗಬೇಕು ಎಂಬ ಕೂಗು ಕೇಳಿ ಬರುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣವು ನ್ಯಾಯಾಲಯದಲ್ಲಿದ್ದು, ಜೂನ್‌ 3ಕ್ಕೆ ವಿಚಾರಣೆ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡುವುದು ಉಚಿತವಲ್ಲ ಎಂದರು.

ದ.ಕ. ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಬೊಮ್ಮಾಯಿ ಅವರು ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ಆಗಮಿಸಿದರು.

ಸಚಿವರಾದ ವಿ. ಸುನಿಲ್‌ ಕುಮಾರ್‌, ಎಸ್‌. ಅಂಗಾರ, ಶಾಸಕರಾದ ಡಾ. ಭರತ್‌ ಶೆಟ್ಟಿ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಮಂಗಳೂರು ಮೇಯರ್‌ ಪ್ರೇಮಾನಂದ ಶೆಟ್ಟಿ, ಬಿಜೆಪಿ ವಿಭಾಗ ಪ್ರಭಾರಿ ಉದಯ ಕುಮಾರ್‌ ಶೆಟ್ಟಿ, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಪೊಲೀಸ್‌ ಆಯುಕ್ತ ಶಶಿಕುಮಾರ್‌ ಸ್ವಾಗತಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next