Advertisement

ಪಠ್ಯದ ಜತೆ ಪಠ್ಯೇತರ ಚಟುವಟಿಕೆ ಅಗತ್ಯ

01:17 AM Jun 06, 2019 | Team Udayavani |

ಬೆಂಗಳೂರು: ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಯಲ್ಲೂ ಸಕ್ರಿಯವಾಗಿರಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್‌.ವೇಣುಗೋಪಾಲ್‌ ಹೇಳಿದರು.

Advertisement

ಬೆಂಗಳೂರು ವಿವಿಯಲ್ಲಿ ಹಮ್ಮಿಕೊಂಡಿದ್ದ ಅಂತರ್‌ ವಿಭಾಗಗಳ ಕ್ರೀಡಾಕೂಟ-2019ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ವಿವಿಯಲ್ಲಿ ಓದುತ್ತಿದ್ದಾಗ ವಿವಿ ಕ್ರಿಕೆಟ್‌ ತಂಡದಲ್ಲಿ ಆಡಿದ ನೆನಪುಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ವಿದ್ಯಾರ್ಥಿಗಳಿಗೆ ಪಠ್ಯ ಬೇಕೆಬೇಕು. ಅದರ ಜತಗೆ ಪಠ್ಯೇತರ ಚಟುವಟಿಕೆಯಲ್ಲೂ ಸಕ್ರಿಯವಾಗಿರಬೇಕು. ಇದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಜತೆಗೆ ಸದಾ ಕ್ರಿಯಾಶೀಲರಾಗಿ, ಚಟುವಟಿಕೆಯಿಂದ ಇರಲು ಅನುಕೂಲವಾಗಲಿದೆ ಎಂದು ಸಲಹೆ ನೀಡಿದರು.

ಕುಲಸಚಿವ ಡಾ.ಬಿ.ಕೆ.ರವಿ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಟಿ. ಲಿಂಗರಾಜು, ಕಾರ್ಯದರ್ಶಿ ಮುನಿವೆಂಕಟಪ್ಪ ಮೊದಲಾದವರು ಇದ್ದರು. ವಿವಿಯ ಚಾಂಪಿಯನ್‌ ಆಗಿ ಹೊರಹೊಮ್ಮಿದ ಭೌತಶಾಸ್ತ್ರ ವಿಭಾಗಕ್ಕೆ ಸಮಗ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next