Advertisement

31ರಂದು ಉದ್ದವ ಠಾಕ್ರೆ ಅಣುಕು ಶವಯಾತ್ರೆ

08:29 PM Dec 28, 2021 | Team Udayavani |

ಕಲಬುರಗಿ: ಕನ್ನಡ ಬಾವುಟ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ ಖಂಡಿಸಿ ಡಿ.31ರಂದು ಕರೆ ನೀಡಿರುವ ಕರ್ನಾಟಕ ಬಂದ್‌ ಬೆಂಬಲಿಸಿ ನಗರದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ರವರ ಅಣುಕು ಶವಯಾತ್ರೆ ಮಾಡಲು ನಿರ್ಧರಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವಿಭಾಗೀಯ ಅಧ್ಯಕ್ಷ ಮಂಜುನಾಥ ನಾಲವಾರಕರ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಸದಸ್ಯರು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ಪದೇ-ಪದೇ ಮಾಡುತ್ತಲೇ ಬರುತ್ತಿದ್ದಾರೆ. ಹೀಗಾಗಿ ಕರ್ನಾಟಕ ಸರ್ಕಾರ ಎಂಇಎಸ್‌ಅನ್ನು ನಿಷೇಧಿಸಬೇಕು ಮತ್ತು ಈ ಘಟನೆಗಳಿಗೆ ಕುಮ್ಮಕ್ಕು ನೀಡುವುದನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ನಿಲ್ಲಸಬೇಕೆಂದು ಒತ್ತಾಯಿಸಿದರು.

ಈ ನಿಟ್ಟಿನಲ್ಲಿ ಡಿ.31ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದ್ದು, ಅಂದು ಒಕ್ಕೂಟದ ನೇತೃತ್ವದಲ್ಲಿ ಮಧ್ಯಾಹ್ನ 12 ಗಂಟೆಗೆ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಉದ್ಧವ ಠಾಕ್ರೆ ಅಣುಕು ಶವಯಾತ್ರೆ ಮಾಡಲಾಗುತ್ತದೆ ಎಂದರು. ಕರವೇ (ಶಿವರಾಮೇಗೌಡ), ಜೈಕನ್ನಡಿಗರ ರಕ್ಷಣಾ ವೇದಿಕೆ, ಕರವೇ (ಪ್ರವೀಣ ಶೆಟ್ಟಿ), ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಬಣ), ಜೈಕರ್ನಾಟಕ ರಕ್ಷಣಾ ಸೇನೆ, ಜೈಕನ್ನಡಿಗರ ಸೇನೆ, ಕನ್ನಡ ರಣಧೀರ ಪಡೆ, ಬೀದಿ ವ್ಯಾಪಾರಿಗಳ ಸಂಘಟನೆಗಳ ಜತೆಗೆ ಅನೇಕ ಮಠಾಧಿಧೀಶರು, ಸಾಹಿತಿಗಳು, ಹೋರಾಟಗಾರರು ಬಂದ್‌ಗೆ ಬೆಂಬಲಿಸಿ ಪ್ರತಿಭಟನೆಗಿಳಿಯಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಗೌರವ ಅಧ್ಯಕ್ಷ ಜಗನ್ನಾಥ ಸೂರ್ಯವಂಶಿ, ಜಿಲ್ಲಾಧ್ಯಕ್ಷ ಸಚಿನ್‌ ಫರಹತಾಬಾದ್‌, ಪ್ರಮುಖರಾದ ದತ್ತು ಭಾಸಗಿ, ಶರಣು ಹೊಸಮನಿ, ಶೇಷಗಿರಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next