Advertisement

ಥಲೆಸ್ಸೀಮಿಯ ಖಾಯಿಲೆಯಿಂದ ಬಳಲುತ್ತಿರುವ ಬಾಲಕನಿಗೆ ಬೇಕಿದೆ ನೆರವಿನ ಹಸ್ತ

08:06 PM Jul 20, 2022 | Team Udayavani |

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ , ಮೂಡಿಗೆರೆ ತಾಲ್ಲೂಕು, ಕೂವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂವೆ ಗ್ರಾಮದ ಬೀರ್ಗೂರು ದಿವಾಕರ ಹಾಗೂ ಶಾಲಿನಿ ದಂಪತಿಗಳ ಪುತ್ರ ರಿತ್ವಿಕ್ ಇವರು ಈಗ ಒಂದನೇ ತರಗತಿ ವ್ಯಾಸಾಂಗ ಮಾಡುತ್ತಿದ್ದು, ಲವಲವಿಕೆಯಿಂದ ಇದ್ದ ಬಾಲಕ ಕಳೆದ ಎರಡುವರೆ ತಿಂಗಳ ಹಿಂದೆ ಇದ್ದಕ್ಕಿದ್ದಂತೆ ದೈಹಿಕವಾಗಿ ಯಾವುದೇ ಚಟುವಟಿಕೆಯಲ್ಲಿ ತೊಡಗದೆ , ನಿರಾಸಕ್ತಿಯೊಂದಿಗೆ ಬಳಲಿ ಕೊನೆಗೆ ಊಟವನ್ನು ಮಾಡಲು ನಿರಾಕರಿಸುವ ಸ್ಥಿತಿಯಲ್ಲಿರುವುದನ್ನು ಕಂಡ ಪೋಷಕರು ಮಂಗಳೂರಿನಲ್ಲಿ ವೈದ್ಯರಲ್ಲಿ ತಪಾಸಣೆ ಮಾಡಿಸಲಾಗಿ ಬಾಲಕನಿಗೆ ಥಲೇಸ್ಸಿಮಿಯ ಖಾಯಿಲೆ ಇರುವುದು ಕಂಡುಬಂದಿರುತ್ತದೆ. ನಂತರ ಪೋಷಕರು ಮಗನ ಚಿಕಿತ್ಸೆಗಾಗಿ ಸಾಕಷ್ಟು ವೆಚ್ಚ ಮಾಡುತ್ತಲೆ ಬಂದಿದ್ದು, ಮಧ್ಯಮ ವರ್ಗದ ಕೃಷಿ ಕುಟುಂಬಸ್ಥರಾದ ಈ ಕುಟುಂಬಕ್ಕೆ ಈಗ ಮಗನ ಬದುಕಿಸಿಕೊಳ್ಳಲು ಸುಮಾರು ನಲವತ್ತು ಲಕ್ಷದಷ್ಟು ಹಣದ ಅವಶ್ಯಕತೆಯಿದ್ದು ರಿತ್ವಿಕ್ ಬದುಕನ್ನು ಹಸನು ಮಾಡಲು ಮಾನವೀಯ ಹೃದಯಗಳ ಸಹಾಯವನ್ನು ಯಾಚಿಸುತ್ತಿದೆ ಈ ಕುಟುಂಬ.

Advertisement

7 ವರ್ಷಕ್ಕೆ ಅಂಟಿಕೊಂಡ ಕಾಯಿಲೆ
ಒಂದನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ರಿತ್ವಿಕ್ ನೋಡಲು ಲವಲವಿಕೆಯಿಂದ ಇದ್ದರೂ ತಿಂಗಳಾಂತ್ಯಕ್ಕೆ ಈತನಿಗೆ ರಕ್ತ ಕೊಡಿಸಲೇಬೇಕಾಗುತ್ತದೆ. ಇಲ್ಲದಿದ್ದಲ್ಲಿ ಮುಖ ಬಿಳಿಚಿಕೊಳ್ಳುತ್ತದೆ, ಜ್ವರ ಬಂದರೆ ಕಡಿಮೆಯಾಗುವುದೇ ಇಲ್ಲ, ಹೌದು ಬಿಳಿ ರಕ್ತ ಕಣ ಉತ್ಪತ್ತಿಯಾಗದೇ ಇರುವ ಖಾಯಿಲೆಯೆ ಥಲೆಸ್ಸೀಮಿಯಾ .

ಇದನ್ನೂ ಓದಿ : ಗೋವಾದಲ್ಲಿ 21 ಅಕ್ರಮ ಮಸಾಜ್ ಪಾರ್ಲರ್ ಗಳ ಮೇಲೆ ಕ್ರಮ

ಮನುಷ್ಯರ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಶಕ್ತಿ ಇರುವುದು ಬಿಳಿ ರಕ್ತಕಣಗಳಿಗೆ ಮಾತ್ರ, ಈ ಬಿಳಿ ರಕ್ತಕಣಗಳು ಉತ್ಪತ್ತಿಯಾಗದೇ ಇದ್ದರೆ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ ಮತ್ತು ಯಾವುದಾದರೂ ಖಾಯಿಲೆ ಬಂದರೆ ಅದು ಕಡಿಮೆಯಾಗುವುದಿಲ್ಲ. ರಿತ್ವಿಕ್ ದೇಹದಲ್ಲಿ ಇಂತಹ ಬಿಳಿ ರಕ್ತಕಣಗಳ ಉತ್ಪತಿ ನಿಂತು ಹೋಗಿದೆ. ಸಾಮಾನ್ಯ ಜ್ವರ ಬಂದರೂ ಕೂಡ ಮೆದುಳಿಗೆ ಹತ್ತಿಕೊಳ್ಳುತ್ತದೆ. ಇದೀಗ ತಿಂಗಳಿಗೆ ಎರಡು ಬಾರಿ ರಕ್ತ ಕೊಡಿಸಲು ಮಂಗಳೂರಿಗೆ ಹೋಗಿಬರುತ್ತಿದ್ದು, ಇತನಿಗೆ ಅಂಟಿದ ಕಾಯಿಲೆ ದೂರವಾಗಬೇಕಾದರೆ ಮೂಳೆ ಮಜ್ಜೆಯ ಕಸಿ ಶಸ್ತ್ರ ಚಿಕಿತ್ಸೆ ( ಬೋನ್ ಮ್ಯಾರೋ ಟ್ರಾನ್ಸ್ ಪ್ಲೇಟೇಶನ್) ಯಿಂದ ಸಾಧ್ಯ ಎಂದಿದ್ದಾರೆ ಬೆಂಗಳೂರಿನ ವೈದ್ಯರು ಆದರೆ ಇದಕ್ಕೆ 40 ಲಕ್ಷಗಳಷ್ಟು ಖರ್ಚು ಇದೆ ಎಂದಿದ್ದಾರೆ ಎನ್ನುತ್ತಾರೆ ದಿವಾಕರ್ . ಆದರೆ ಇವರಿಗೆ ಇಷ್ಟೊಂದು ಹಣವನ್ನು ಹೊಂದಿಸುವುದು ಕಷ್ಟವಾಗಿದ್ದು ಈಗಾಗಲೇ ಸಾಕಷ್ಟು ಹಣ ಖರ್ಚು ಮಾಡಿರುತ್ತಾರೆ. ಆದ್ದರಿಂದ ಸಹೃದಯಿ ಬಂಧುಗಳು ತಮ್ಮ ಕೈಯಲ್ಲಾದ ಸಹಾಯ ಮಾಡಿ ತಮ್ಮ ಮಗನಿಗೆ ಅಂಟಿದ ಕಾಯಿಲೆಯನ್ನು ಗುಣ ಮಾಡಲು ನೆರವಾಗಿ ಎಂದು ಕೇಳಿಕೊಂಡಿದ್ದಾರೆ.

ಸಹಾಯ ಮಾಡುವವರು ರಿತ್ವಿಕ್ ರವರ ತಂದೆ ದಿವಾಕರ ರವರ ಹೆಸರಿಲ್ಲಿರುವ ಕೆನರಾ ಬ್ಯಾಂಕ್ ಬನ್ನೂರು ಶಾಖೆಯ ಖಾತೆ ಸಂಖ್ಯೆ 5391101001255 ಕ್ಕೆ ಅಥವಾ 6363924671 ಮೊಬೈಲ್ ಸಂಖ್ಯೆಗೆ ಪೋನ್ ಪೇ / ಗೂಗಲ್ ಪೇ ಮೂಲಕ ಸಹಾಯ ಮಾಡಬಹುದು.

Advertisement

ಹೆಚ್ಚಿನ ಮಾಹಿತಿಗಾಗಿ ಮೊ. 6363924671 ಗೆ ಕರೆ ಮಾಡಬಹುದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next