Advertisement

ಥಾಣೆಯ ಆದಿಶಕ್ತಿ ಕನ್ನಡ ಶಾಲೆಯ ವಾರ್ಷಿಕ ಕ್ರೀಡೋತ್ಸವ

12:41 PM Dec 22, 2017 | |

ಥಾಣೆ: ಮಾಜಿವಾಡಾ ಭವಾನಿ ನಗರದ ಶ್ರೀ ಆದಿಶಕ್ತಿ ಕನ್ನಡ ಸಂಘ ಸಂಚಾಲಿತ ಶ್ರೀ ಆದಿಶಕ್ತಿ ಕನ್ನಡ ಶಾಲೆಯ ಕ್ರೀಡೋತ್ಸವವು ಡಿ. 10ರಂದು ಮಾಜಿವಾಡಾದ ಗ್ರಾಮೀಣ ವಿದ್ಯಾಲಯದ ಕ್ರೀಡಾಂಗಣದಲ್ಲಿ ವೈವಿಧ್ಯಮಯ ಕ್ರೀಡಾಸ್ಪರ್ಧೆಗಳೊಂದಿಗೆ ಜರಗಿತು.

Advertisement

ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಭಾಸ್ಕರ ಎಂ. ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಥಾಣೆ ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ರೇವತಿ ಸದಾನಂದ ಶೆಟ್ಟಿ ಮತ್ತು ಉದ್ಯಮಿ ರವೀಂದ್ರ ಶೆಟ್ಟಿ ಅವರು ಆಗಮಿಸಿ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು. ಬೆಳಗ್ಗೆ 8ರಿಂದ ಕ್ರೀಡೋತ್ಸವವು ನಡೆದು ಮಧ್ಯಾಹ್ನ ಸಂಪನ್ನಗೊಂಡಿತು. ಅನಂತರ ಬಹುಮಾನ ವಿತರಣೆ ಕಾರ್ಯಕ್ರಮವು ಶಾಲಾ ವೇದಿಕೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ರೇವತಿ ಸದಾನಂದ ಶೆಟ್ಟಿ ಅವರು ಮಾತನಾಡಿ, ಕ್ರೀಡಾಸ್ಪರ್ಧೆಯು ವಿದ್ಯಾರ್ಥಿ ಜೀವನದ ಸಂತೋಷದ ದಿನವಾಗಿದೆ. ನನ್ನ ಬಾಲ್ಯನ ದಿನಗಳನ್ನು ಇಂದು ಪುನಃ ನೆನಪಿಸಿದಕ್ಕಾಗಿ ವಂದನೆಗಳು. ಕ್ರೀಡೆಯು ದೈಹಿಕ ಹಾಗೂ ಮಾನಸಿಕ ದೃಢತೆಯನ್ನು ಪ್ರಾಮುಖ್ಯವಾಗಿದೆ. ಪದ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಪುಸ್ತಕದ ಒಂದು ಭಾಗವಾಗಿದೆ. ಸ್ಪರ್ಧೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಅದನ್ನು ಸಮಾನ ಮನಸ್ಸಿನಿಂದ ಸ್ವೀಕರಿಸಬೇಕು ಎಂದರು.

ಸಂಘದ ಅಧ್ಯಕ್ಷ ಭಾಸ್ಕರ ಎಂ. ಶೆಟ್ಟಿ ಅವರು ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ವಿದ್ಯೆ, ಬುದ್ಧಿ, ಆಟ, ಪಾಠ ಇವು ವಿದ್ಯಾರ್ಥಿ ಜೀವನದಲ್ಲಿ ಮಹತ್ವದ್ದಾಗಿದೆ. ಪಾಲಕರು ಮಕ್ಕಳ ಪ್ರಗತಿಗಾಗಿ ಶ್ರಮಿಸಬೇಕು. ಅವರ ಸರ್ವತೋಮುಖ ಬೆಳವಣಿಗೆಗೆ ಸಹಕರಿಸಬೇಕು. ಮಕ್ಕಳು ಅಭಿರುಚಿಯನ್ನು ಅರಿತುಕೊಂಡು ಅವರನ್ನು ಬೆಳೆಸಬೇಕು ಎಂದು ಹೇಳಿದರು.

ಮಾಧ್ಯಮಿಕ ಶಾಲಾ ಮುಖ್ಯ ಶಿಕ್ಷಕಿ ವಿಮಲಾ ಕರ್ಕೇರ ಸ್ವಾಗತಿಸಿದರು. ಸಹ ಶಿಕ್ಷಕಿ ಮಮತಾ ಶೆಟ್ಟಿ ಅವರು ಅತಿಥಿಗಳನ್ನು ಪರಿಚಯಿಸಿದರು. ಸಹ ಶಿಕ್ಷಕಿ ಪ್ರಮೋದಾ ಮಾಡಾ ಮತ್ತು ನಳಿನಿ ಶೆಟ್ಟಿ ಅವರು ವಿಜೇತರ ಯಾದಿಯನ್ನು ವಾಚಿಸಿದರು. ವೇದಿಕೆಯಲ್ಲಿ ಸಂಘದ ಕಾರ್ಯದರ್ಶಿ ವಾದಿರಾಜ ಶೆಟ್ಟಿ, ಕೋಶಾಧಿಕಾರಿ ಮನೋಹರ ಅಂಚನ್‌, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ರವೀಂದ್ರ ಬಿ.  ಅವರು ಉಪಸ್ಥಿತರಿದ್ದರು.

Advertisement

ಮಾಜಿ ಅಧ್ಯಕ್ಷ ಶಿಮಂತೂರು ಶಂಕರ್‌ ಶೆಟ್ಟಿ ಮತ್ತು ಮಾಜಿ ಕೋಶಾಧಿಕಾರಿ ಕೇಶವ ಆಳ್ವ ಅವರುಸಮಾರಂಭದ ಯಶಸ್ಸಿಗೆ ಸಹಕರಿಸಿದರು. ಸಹಶಿಕ್ಷಕ ವೆಂಕಟರಮಣ ಶೆಣೈ ಅವರು ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ಸಂತೋಷ್‌ ದೊಡ್ಮನೆ ವಂದಿಸಿ ದರು. ವಿದ್ಯಾರ್ಥಿಗಳು, ಶಿಕ್ಷಣ ವೃಂದದವರು, ಪಾಲಕರು, ಶಿಕ್ಷಣ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next