Advertisement
ಸಮಾಜ ಬಾಂಧವರಿಗಾಗಿ ನಡೆದ ಈ ಪಂದ್ಯಾಟದ ಉದ್ಘಾಟನೆಯು ಬೆಳಗ್ಗೆ ಸಂಸ್ಥೆಯ ಅಧ್ಯಕ್ಷ ಕುಶಲ್ ಸಿ. ಭಂಡಾರಿ ಅಧ್ಯಕ್ಷತೆಯಲ್ಲಿ, ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷರಾದ ಯೋಗೇಶ್ ಶೆಟ್ಟಿ, ಪುಷ್ಪರಾಜ್ ಶೆಟ್ಟಿ, ಹರಿಶ್ಚಂದ್ರ ಶೆಟ್ಟಿ ಹಾಗೂ ಯುವ ವಿಭಾಗದ ಕಾರ್ಯಾಧ್ಯಕ್ಷ ರಂಜನ್ ಆರ್. ಶೆಟ್ಟಿ ಅವರ ಮುಂದಾಳತ್ವದಲ್ಲಿ ನೆರವೇರಿತು.
Related Articles
Advertisement
ಅತಿಥಿ-ಗಣ್ಯರನ್ನು ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ, ಯೋಗೇಶ್ ಶೆಟ್ಟಿ ಮತ್ತು ಹರಿಶ್ಚಂದ್ರ ಶೆಟ್ಟಿ ಅವರು ಶಾಲು ಹೊದೆಸಿ, ಪುಷ್ಪಗುತ್ಛ, ಸ್ಮರಣಿಕೆಯನ್ನಿತ್ತು ಗೌರವಿಸಿದರು. ವೇದಿಕೆಯಲ್ಲಿ ಅಸೋಸಿಯೇಶನ್‌ನ ಜತೆ ಕಾರ್ಯದರ್ಶಿ ಸುನಿಲ್ ಜೆ. ಶೆಟ್ಟಿ, ಕೋಶಾಧಿಕಾರಿ ಭಾಸ್ಕರ ಎನ್. ಶೆಟ್ಟಿ, ಜತೆ ಕಾರ್ಯದರ್ಶಿ ಅಶೋಕ್ ಎಂ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಮತಿ ಕೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಯೋಗೇಶ್ ಜಿ. ಶೆಟ್ಟಿ, ಪುಷ್ಪರಾಜ್ ಎಲ್. ಶೆಟ್ಟಿ, ಹರಿಶ್ಚಂದ್ರ ಶೆಟ್ಟಿ ಅವರು ಉಪಸ್ಥಿತರಿದ್ದರು. ಸಂಸ್ಥೆಯ ಪದಾಧಿಕಾರಿಗಳನ್ನು ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷರು ಗೌರವಿಸಿದರು. ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳನ್ನು, ಸಂಸ್ಥೆಯ ಮಾಜಿ ಅಧ್ಯಕ್ಷರನ್ನು ಗೌರವಿಸಲಾಯಿತು.
ಕಾರ್ಯದರ್ಶಿ ನವೀನ್ ಜೆ. ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಸಂಸ್ಥೆಯ ಮುಖವಾಣಿ ಸ್ನೇಹ ಸೌರಭದ ಸಂಪಾದಕ ನಿತ್ಯಾನಂದ ಶೆಟ್ಟಿ ಬೆಳುವಾಯಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಮನೀಷ್ ಶೆಟ್ಟಿ ಅವರು ಕ್ರೀಡಾ ವೀಕ್ಷಕ ವಿವರಣೆಯನ್ನು ನೀಡಿದರು. ಸಂಜೆ ಕ್ರೀಡಾಕೂಟದ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭವು ಕುಶಲ್ ಸಿ. ಭಂಡಾರಿ ಅಧ್ಯಕ್ಷತೆಯಲ್ಲಿ ನಡೆಯಿತು.
ಕ್ರೀಡಾಕೂಟದಲ್ಲಿ ಕನಕ ಫುಡ್‌ನ ಆಡಳಿತ ನಿರ್ದೇಶಕ ಜಗದೀಶ್ ಶೆಟ್ಟಿ ಅವರ ಪ್ರಾಯೋಜಕತ್ವದಲ್ಲಿ ಬೆಳಗ್ಗೆಯ ಉಪಾಹಾರ, ಮಧ್ಯಾಹ್ನದ ಭೋಜನ, ಸಂಜೆಯ ಚಹಾ-ತಿಂಡಿ ಹಾಗೂ ರಾತ್ರಿಯ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಬಂಟರ ಸಂಘ ಮುಂಬಯಿ ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿ ಮತ್ತು ಜವಾಬ್ ತಂಡಗಳ ಮಧ್ಯೆ ಉದ್ಘಾಟನಾ ಪಂದ್ಯ ನಡೆಯಿತು.