ನವದೆಹಲಿ: ಲೋಕಸಭೆಯಲ್ಲಿ ಗುರುವಾರ(ಫೆ.01) 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಸಂಗ್ರಹ ದುಪ್ಪಟ್ಟಾಗಿರುವ ಹಿನ್ನೆಲೆಯಲ್ಲಿ ತೆರಿಗೆ ಪಾವತಿದಾರರನ್ನು ಅಭಿನಂದನೆ ಸಲ್ಲಿಸಿದರು.
ಇದನ್ನೂ ಓದಿ:Drone Prathap: ನಕ್ಕು ನಗಿಸಲು ʼಗಿಚ್ಚಿ ಗಿಲಿ ಗಿಲಿʼಯಲ್ಲಿ ಬರಲಿದ್ದಾರೆ ಡ್ರೋನ್ ಪ್ರತಾಪ್
ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 6ನೇ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ಜನರಿಗೆ ಹೊಸ ಮನೆ ನಿರ್ಮಾಣ, ಮನೆಯ ಮೇಲ್ಚಾವಣೆ ಮೇಲೆ ಸೋಲಾರ್ ಪ್ಯಾನಲ್ ಅಳವಡಿಕೆ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುವುದಾಗಿ ಬಜೆಟ್ ನಲ್ಲಿ ತಿಳಿಸಿದ್ದು, ಜೈ ಹಿಂದ್ ಎಂದು ಹೇಳುವ ಮೂಲಕ 57 ನಿಮಿಷಗಳಲ್ಲಿ ಬಜೆಟ್ ಭಾಷಣವನ್ನು ಮುಕ್ತಾಯಗೊಳಿಸಿದ್ದರು.
ಮುಂದಿನ ಐದು ವರ್ಷಗಳ ಕಾಲ ಸುವರ್ಣ ಗಳಿಗೆಯಾಗಿದೆ. ಭಾರತದಲ್ಲಿ ಸರ್ವೈಕಾಲ್ ಕ್ಯಾನ್ಸರ್ ಮಹಿಳೆಯರಲ್ಲಿ ಹೆಚ್ಚಳವಾಗುತ್ತಿರುವ ಬಗ್ಗೆ ಸಚಿವೆ ನಿರ್ಮಲಾ ಸೀತಾರಾಮನ್ ಕಳವಳ ವ್ಯಕ್ತಪಡಿಸಿದರು. ಈ ನಿಟ್ಟಿನಲ್ಲಿ 9ರಿಂದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಲಸಿಕೆ ನೀಡಲು ಸರ್ಕಾರ ಒತ್ತು ನೀಡಲಿದೆ ಎಂದು ತಿಳಿಸಿದರು.
ಸ್ಕಿಲ್ ಇಂಡಿಯಾ ಮಿಷನ್ ಯೋಜನೆಯಡಿ 1.4 ಕೋಟಿ ಯುವಕರಿಗೆ ತರಬೇತಿ ನೀಡಲಾಗಿದ್ದು, ಪುನರ್ ಕೌಶಲ್ಯ ಯೋಜನೆಯಡಿ 54 ಲಕ್ಷ ಯುವಕರಿಗೆ ತರಬೇತಿ ನೀಡಲಾಗಿದೆ. ದೇಶದಲ್ಲಿ 3,000 ಐಐಟಿ ನಿರ್ಮಾಣ ಮಾಡಲಾಗಿದೆ. ಅಷ್ಟೇ ಅಲ್ಲ 7 ಐಐಟಿ, 16 ಐಐಐಟಿಎಸ್, 7 ಐಐಎಂಎಸ್, 15 ಎಐಐಎಂಎಸ್ ಅನ್ನು ಸರ್ಕಾರ ನಿರ್ಮಿಸಿರುವುದಾಗಿ ಸಚಿವೆ ನಿರ್ಮಲಾ ಬಜೆಟ್ ನಲ್ಲಿ ತಿಳಿಸಿದ್ದಾರೆ.