Advertisement

ಆ. 19: ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ

06:20 AM Aug 18, 2017 | Team Udayavani |

ಉಡುಪಿ: ಉಚ್ಚಿಲದ ಶ್ರೀ ಮಹಾಲಕ್ಷ್ಮೀ ಸಭಾಭವನದಲ್ಲಿ ಜಿಲ್ಲಾ ಬಿಜೆಪಿಯ 5ನೇ ವಿಶೇಷ ಕಾರ್ಯಕಾರಿಣಿ ಸಭೆ ಆ. 19 ರ ಬೆಳಗ್ಗೆ 9.30 ರಿಂದ ಮಧ್ಯಾಹ್ನ 4.30 ರವರೆಗೆ ಜಿಲ್ಲಾಧ್ಯಕ್ಷ ಮಟ್ಟಾರ್‌ ರತ್ನಾಕರ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಸದೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದು, ಜಿಲ್ಲಾ ಪ್ರಭಾರಿ, ಸಂಸದ ಅನಂತ ಕುಮಾರ್‌ ಹೆಗಡೆ ಪಾಲ್ಗೊಳ್ಳಲಿದ್ದಾರೆ ಎಂದು ಪ್ರ. ಕಾರ್ಯದರ್ಶಿ ಕುತ್ಯಾರು ನವೀನ್‌ ಶೆಟ್ಟಿ ತಿಳಿಸಿದ್ದಾರೆ.

Advertisement

ಮರಳುಗಾರಿಕೆ ಪರ್ಮಿಟ್‌ಗಾಗಿ ಅರ್ಜಿ ಸಲ್ಲಿಸುವ ಅವಕಾಶ ಪಾರಂಪರಿಕವಾಗಿ ಮುಳುಗಿ ಮರಳು ತೆಗೆಯುವ ಕಸುಬುದಾರರಿಗೆ ಮಾತ್ರ ಇದೆ. ಹಾಗಾಗಿ ಮರಳು ನಿರ್ವಹಣೆಯ ಹಕ್ಕು ಕೂಡ ಅವರಿಗೆ ನೀಡಬೇಕು ಎಂದು ಜಿಲ್ಲಾ ವಕ್ತಾರ ಕಟಪಾಡಿ ಶಂಕರ ಪೂಜಾರಿ ಇದೇ ವೇಳೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next