Advertisement
ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸುವ ಕುರಿತು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಸ್ತುತ ಪಟ್ಟಣದಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರಕ್ಕೆ ತೀವ್ರ ದಕ್ಕೆ ಉಂಟಾಗಿದೆ. ಆದ್ದರಿಂದ ಶನಿವಾರದಿಂದಲೇ ಪ್ಲಾಸ್ಟಿಕ್ ನಿಷೇಧಕ್ಕೆ ಚಾಲನೆ ನೀಡಲು ಬಂದಿರುವುದಾಗಿ ತಿಳಿಸಿದರು.
Related Articles
Advertisement
ಅದಕ್ಕೆ ಸಹಮತ ವ್ಯಕ್ತ ಪಡಿಸಿದ ಉಪವಿಭಾಗಾಧಿಕಾರಿ ಡಾ. ಎಚ್.ಎಲ್.ನಾಗರಾಜು ಇದಕ್ಕೆ ಬೇಕಾದ ಕಾರ್ಯಕ್ರಮಗ ಳನ್ನು ಹಮ್ಮಿಕೊಂಡು ಸಾರ್ವಜನಿಕರು ಮತ್ತು ವರ್ತಕರುಗಳಿಗೆ ಅರಿವು ಮೂಡಿಸಲು ವರ್ತಕರ ಸಂಘ ಸಹಕರಿಸುವಂತೆ ತಿಳಿಸಿದರು.
ಈ ಸಭೆಗೆ ಕೇವಲ ಒಂದೇ ಒಂದು ವರ್ತಕ ಸಂಘದ ಹಾಜ ರಾತಿ ಇದೆ, ಆದರೆ ಪಟ್ಟಣದ ಇನ್ನು ಮೂರು-ನಾಲ್ಕು ಸಂಘ ಗಳಿದ್ದು, ಅವುಗಳನ್ನು ಈ ನಿಷೇಧ ಕಾರ್ಯಕ್ರಮಕ್ಕೆ ಸೇರ್ಪಡೆ ಮಾಡಿಕೊಳ್ಳುವುದರಿಂದ ಪ್ಲಾಸ್ಟಿಕ್ ನಿಷೇಧದ ಕಾರ್ಯಕ್ರಮ ಸಫಲತೆ ಕಾಣಲು ಸಾಧ್ಯವಿದೆ ಎಂದು ಸಭೆ ನಿರ್ಧರಿಸಿತು.
ಸಾರ್ವಜನಿಕರುಗಳು ತಮ್ಮಲ್ಲಿನ ಅನಿಸಿಕೆಗಳನ್ನು ವ್ಯಕ್ತ ಪಡಿಸಿ ಪ್ಲಾಸ್ಟಿಕ್ ನಿಷೇಧಕ್ಕೆ ಮೊದಲು ಅದಕ್ಕೆ ಪರ್ಯಾಯ ವ್ಯವಸ್ಥೆ ಬಗ್ಗೆ ತೀವ್ರವಾಗಿ ಚರ್ಚೆ ನಡೆಯಿತು. ಉಪವಿಭಾಧಿಕಾರಿ ಎಚ್.ಎಲ್.ನಾಗರಾಜು ಅವರೊಂದಿಗೆ ಆಗಮಿಸಿದ್ದ ಅಧಿಕಾರಿಗಳು ಪ್ಲಾಸ್ಟಿಕ್‌ಗೆ ಪರ್ಯಾಯÊಾಗಿ ಬೇಕಾದ ಸಲಕರಣೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ತಾಲೂಕು ವರ್ತಕರ ಸಂಘದ ಅಧ್ಯಕ್ಷ ಕೆ. ಶ್ರೀಧರ್, ತಾಲೂಕು ಸ್ವಾಮಿ ವಿವೇಕಾನಂದ ಯುವ ವೇದಿಕೆ ಅಧ್ಯಕ್ಷ ಎಂ.ಎಂ.ಎ.ರಹೆಮಾನ್ ಸೇರಿದಂತೆ ಪಟ್ಟಣದ ಬೆರ ಳೆಣಿಕೆಯಷ್ಟು ಮಂದಿ ವರ್ತಕರು ಮತ್ತು ವಿವಿಧ ಸಂಘದ ಪದಾಧಿಕಾರಿಗಳು ಹಾಜರಿದ್ದರು. ಪುರಸಭೆ ಮುಖ್ಯಾಧಿಕಾರಿ ಕೃಷ್ಣ, ತಾಲೂಕು ವೈದ್ಯಾಧಿಕಾರಿ ಎಚ್.ಎನ್.ರಾಜೇಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.