Advertisement

ಆ. 1ರಿಂದ ಸ್ವತ್ಛ  ಸರ್ವೇಕ್ಷಣ ಗ್ರಾಮೀಣ-2018: ಖಾದರ್‌

01:14 PM Jul 28, 2018 | Team Udayavani |

ಮಂಗಳೂರು: ಸ್ವತ್ಛ ಭಾರತ್‌ ಮಿಷನ್‌ (ಗ್ರಾಮೀಣ) ಯೋಜನೆಯಡಿ ಗ್ರಾಮ ನೈರ್ಮಲ್ಯ ಸುಧಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯ ಸ್ವತ್ಛ ಸರ್ವೇಕ್ಷಣ ಗ್ರಾಮೀಣ-2018 ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ. 1ರಿಂದ 30ರ ವರೆಗೆ ಸಮೀಕ್ಷೆ ನಡೆಯಲಿದೆ ಎಂದು  ಸಚಿವ ಯು.ಟಿ. ಖಾದರ್‌ ತಿಳಿಸಿದರು.

Advertisement

ನಗರದ ಸಕೀìಟ್‌ ಹೌಸ್‌ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  ಸಾರ್ವಜನಿಕ ಸ್ಥಳಗಳು, ಶಾಲೆಗಳು, ಅಂಗನವಾಡಿ ಕೇಂದ್ರಗಳು, ಸಂತೆ ಸ್ಥಳ, ಕುಡಿಯುವ ನೀರು ಸಂಗ್ರಹ ಸ್ಥಳ, ಗ್ರಾ.ಪಂ.ಕಚೇರಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಗ್ರಾಮದ ಮುಖ್ಯ ಬೀದಿಗಳಲ್ಲಿ, ಧಾರ್ಮಿಕ ಸ್ಥಳಗಳಲ್ಲಿ ಸ್ವತ್ಛತೆ ಕಾಪಾಡುವುದು, ಶೌಚಾಲಯ ಸುಸ್ಥಿತಿಯಲ್ಲಿಡುವ ಮೂಲಕ ಸ್ವತ್ಛ ಸರ್ವೇಕ್ಷಣ ಗ್ರಾಮೀಣ- 2018 ಯಶಸ್ವಿಗೊಳಿಸಬೇಕಿದೆ ಎಂದರು. 

ಸರ್ವೆ ತಂಡವು ಗ್ರಾಮಗಳಿಗೆ ಭೇಟಿ ನೀಡಿ ಮೌಲ್ಯಮಾಪನ ಮಾಡಿ ಜಿಲ್ಲೆಗಳಿಗೆ ಶ್ರೇಣಿಯನ್ನು ನೀಡಲಿದೆ. ಉತ್ತಮ ಶ್ರೇಣಿ ಪಡೆದ ರಾಜ್ಯ ಮತ್ತು ಜಿಲ್ಲೆಗಳಿಗೆ ಅ. 2ರಂದು ಹೊಸದಿಲ್ಲಿಯಲ್ಲಿ ಗಾಂಧಿ ಜಯಂತಿ
ದಿನದಂದು ಪುರಸ್ಕಾರ ನೀಡಿ ಗೌರವಿಸಲಾಗು ವುದು ಎಂದು ವಿವರಿಸಿದರು.

ಕೈಪಿಡಿ, ಭಿತ್ತಿಪತ್ರ ಬಿಡುಗಡೆ
ಸ್ವತ್ಛ ಸರ್ವೇಕ್ಷಣ ಗ್ರಾಮೀಣ-2018 ಕೈಪಿಡಿ ಹಾಗೂ ಭಿತ್ತಿಪತ್ರವನ್ನು ಸಚಿವರು ಬಿಡುಗಡೆ ಮಾಡಿದರು. 
ಜಿಲ್ಲೆಯಲ್ಲಿ ಕಳೆದ ಬಾರಿ ನಡೆದಿದ್ದ ಸಾಮಾಜಿಕ ಪರಿಶೋಧನೆಯಲ್ಲಿ ಶೌಚಾಲಯಗಳು ಇಲ್ಲದ ಒಟ್ಟು 3,562 ಮನೆಗಳನ್ನು ಗುರುತಿಸಲಾಗಿತ್ತು. ಇದರಲ್ಲಿ 124 ಮನೆ ಹೊರತುಪಡಿಸಿ ಎಲ್ಲ ಮನೆಗಳಿಗೆ ಶೌಚಾಲಯ ನಿರ್ಮಾಣವಾಗಿದೆ. ಬಾಕಿಯುಳಿದ ಮನೆಗಳಿಗೆ ಶೌಚಾಲಯ ನಿರ್ಮಾಣ ಈ ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯತ್‌ ಸಿಇಒ ಡಾ| ಎಂ.ಆರ್‌. ರವಿ ತಿಳಿಸಿದರು.

ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕ ಜೆ.ಆರ್‌. ಲೋಬೋ, ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌, ಅಪರ ಜಿಲ್ಲಾಧಿಕಾರಿ ಕುಮಾರ್‌, ಮಂಗಳೂರು ತಾ.ಪಂ. ಅಧ್ಯಕ್ಷ ಮಹಮ್ಮದ್‌ ಮೋನು ಉಪಸ್ಥಿತರಿದ್ದರು.

Advertisement

“ಕನ್ವರ್ಶನ್‌, ಸಿಂಗಲ್‌ ಸೈಟ್‌ ಸಮಸ್ಯೆಗೆ ಅಧಿಕಾರಿ ಮಟ್ಟದಲ್ಲಿ ಸಭೆ’ ಕನ್ವರ್ಶನ್‌, ಸಿಂಗಲ್‌ ಸೈಟ್‌, 9/11, ವಲಯ ನಿಯಮ ಸೇರಿದಂತೆ ವಸತಿ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬೆಂಗಳೂರಿನಲ್ಲಿ ಶನಿವಾರ ಅಧಿಕಾರಿಗಳ ಸಭೆ ಆಯೋಜಿಸಲಾಗಿದೆ ಎಂದು ಸಚಿವ ಖಾದರ್‌ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಭೆಯಲ್ಲಿ ನಗರಾಭಿವೃದ್ಧಿ, ಕಂದಾಯ, ಗ್ರಾಮೀಣಾಭಿವೃದ್ಧಿ ಮುಂತಾದ ಇಲಾಖೆಗಳ ಸಚಿವರು, ಪ್ರಧಾನ ಕಾರ್ಯದರ್ಶಿಗಳು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಪಟ್ಟಂತೆ ಈಗಾಗಲೇ ಜಿಲ್ಲಾಧಿಕಾರಿಯವರು 3 ಸಭೆಗಳನ್ನು ನಡೆಸಿ ವಿಸ್ತೃತ ವರದಿ ಸಲ್ಲಿಸಿದ್ದಾರೆ ಎಂದರು. 

ಸ್ವತ್ಛ  ಸರ್ವೇಕ್ಷಣ ಗ್ರಾಮೀಣ-2018 ಕಾರ್ಯಕ್ರಮದಲ್ಲಿ ದೇಶಾದ್ಯಂತ 698 ಜಿಲ್ಲೆಗಳು 6,980 ಗ್ರಾಮಗಳು, 50 ಲಕ್ಷ ನಾಗರಿಕರ ಸಂದರ್ಶನ ಮತ್ತು ಅಭಿಪ್ರಾಯಗಳನ್ನು ಪಡೆಯುವುದು ಹಾಗೂ 34,900 ಸಾರ್ವಜನಿಕ ಸ್ಥಳಗಳನ್ನು ಸಮೀಕ್ಷೆಗೆ ಒಳಪಡಿಸುವುದು ಸರ್ವೇಕ್ಷಣೆಯ ಗುರಿ. 
 - ಯು.ಟಿ. ಖಾದರ್‌

Advertisement

Udayavani is now on Telegram. Click here to join our channel and stay updated with the latest news.

Next