ಬೆಂಗಳೂರು: ಕರ್ನಾಟಕ ಹೈಕೋರ್ಟ್ಗೆ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಹಾಗೂ ವೆಂಕಟೇಶ್ ನಾಯ್ಕ ತಾವರ್ಯನಾಯ್ಕ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.
Advertisement
ರಾಜಭವನದಲ್ಲಿ ಜರಗಿದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ, ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.