Advertisement

ಕೋವಿಡ್ ರೋಗಿಯ ಮೇಲೆ ಅತ್ಯಾಚಾರ-ಸಂತ್ರಸ್ತೆ ಸಾವು : ತಿಂಗಳ ನಂತರ ಪ್ರಕರಣ ಬೆಳಕಿಗೆ

08:48 AM May 14, 2021 | Team Udayavani |

ಭೋಪಾಲ್ : ಇಲ್ಲಿನ ಬಿ ಎಂ ಹೆಚ್ ಆರ್ ಸಿ ಆಸ್ಪತ್ರೆಯಲ್ಲಿ ಕೋವಿಡ್  ರೋಗಿಯ ಮೇಲೆ ಪುರುಷ ನರ್ಸ್ ಒಬ್ಬ ಅತ್ಯಾಚಾರ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೆ ಒಳಗಾದ 43 ವರ್ಷದ ಮಹಿಳೆಯು ಸಾವನ್ನಪ್ಪಿದ್ದಾಳೆ.

Advertisement

ಈ ಘಟನೆಯು ಕಳೆದ ಏಪ್ರಿಲ್ 6 ರಂದೇ ನಡೆದಿದ್ದರೂ ಆಸ್ಪತ್ರೆ ಆಡಳಿತ ಮಂಡಳಿ ಮತ್ತು ಪೊಲೀಸರು ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ಮಾಡಿದ್ದಾರೆ. ಒಂದು ತಿಂಗಳು ಕಳೆದ ನಂತರ ಸಾಮಾಜಿಕ ಕಾರ್ಯಕರ್ತರು ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆಸಿದಾಗ ಪ್ರಕರಣವು ಬೆಳಕಿಗೆ ಬಂದಿದೆ.

ನಿಶತ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು 40 ವರ್ಷದ ಸಂತೋಷ್ ಅಹಿರ್ವಾರ್ ಎಂದು ಗುರುತಿಸಲಾಗಿದೆ. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯು ಈ ಹಿಂದೆ 24 ವರ್ಷದ ಸ್ಟಾಫ್ ನರ್ಸ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಅಲ್ಲದೆ  ಕೆಲಸದ ವೇಳೆಯಲ್ಲಿಯೇ ಮದ್ಯಪಾನ ಮಾಡಿದ್ದಕ್ಕಾಗಿ ಅಮಾನತು ಆಗಿದ್ದನು ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next