Advertisement

Bellare; ಗಾಂಜಾ ಮಾರಾಟ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

11:24 PM Feb 18, 2024 | Team Udayavani |

ಸುಳ್ಯ: ಬೆಳ್ಳಾರೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 4 ವರ್ಷಗಳ ಹಿಂದೆ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

Advertisement

ಹಾಸನ ಜಿಲ್ಲೆಯ ಕೆರೆಕೋಡಿ ನಿವಾಸಿ ಸಾದಿಕ್‌ ಶರೀಫ್‌ ಬಂಧಿತ ಆರೋಪಿ. ಈತನ ಬಂಧನಕ್ಕಾಗಿ ಬಲೆ ಬೀಸಿದ್ದ ಪೊಲೀಸರು ಆರೋಪಿಯನ್ನು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮಾಚಗೇನಹಳ್ಳಿಯಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ ಅವರ ಮಾರ್ಗದರ್ಶನದಲ್ಲಿ ಬೆಳ್ಳಾರೆ ಪೊಲೀಸ್‌ ಠಾಣಾ ಉಪನಿರೀಕ್ಷಕ ಸಂತೋಷ್‌ ಬಿ.ಪಿ., ಸಿಬಂದಿಗಳಾದ ಪ್ರವೀಣ್‌ ಹಾಗೂ ಸಂತೋಷ್‌ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next