Advertisement

ಎಸಿಬಿ ದುರ್ಬಳಕೆ ಮಾಡಿಕೊಳ್ಳುತ್ತಿಲ್ಲ

12:50 PM Oct 07, 2018 | |

ಬೆಂಗಳೂರು: ಎಸಿಬಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಯಾವುದೇ ದಾಳಿ ನಡೆಸುತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಪರಮೇಶ್ವರ ಹೇಳಿದ್ದಾರೆ. ಬಿಡಿಎ ಅಧಿಕಾರಿ ಗೌಡಯ್ಯನ ಮನೆ ಮೇಲೆ ದಾಳಿ ಮಾಡಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಈಗಾಗಲೇ ಎಸಿಬಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅವರು ತಪ್ಪಿತಸ್ಥರು ಎಂಬುದು ಸಾಬೀತಾದರೆ ಶಿಕ್ಷೆಯಾಗುತ್ತದೆ ಎಂದು ತಿಳಿಸಿದರು.

Advertisement

ಸರ್ಕಾರ ಯಾವುದೇ ಅಧಿಕಾರಿಗಳನ್ನು ರಕ್ಷಣೆ ಮಾಡುವುದಿಲ್ಲ. ಬಿಡಿಎಯಲ್ಲಿ ಈಗಾಗಲೇ ಅನಗತ್ಯವಾಗಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತಿದೆ. ಸರ್ಕಾರ ಯಾರ ಬೆಂಬಲಕ್ಕೂ ನಿಂತಿಲ್ಲ ಎಂದು ಹೇಳಿದರು. ಇದೇ ವೇಳೆ, ಲೋಕಾಯುಕ್ತವನ್ನು ದುರ್ಬಲಗೊಳಿಸಲಾಗಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಹೈಕೋರ್ಟ್‌ಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಲೋಕಾಯುಕ್ತಕ್ಕೆ ಅದರದ್ದೇ ಆದ ಕಾರ್ಯವ್ಯಾಪ್ತಿ ಇದೆ.

ಸರ್ಕಾರ ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸುವ ಕೆಲಸ ಮಾಡಿಲ್ಲ. ಎಸಿಬಿ ರಚನೆ ಮಾಡಿರುವುದರ ವಿರುದ್ಧದ ಪ್ರಕರಣ ಹೈಕೋರ್ಟ್‌ನಲ್ಲಿದೆ. ಹೈಕೋರ್ಟ್‌ ಆದೇಶ ಬಂದ ನಂತರ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು. ಇದೇ ವೇಳೆ, ಅರಣ್ಯ ಸಚಿವ ಆರ್‌.ಶಂಕರ್‌ ಕಾಂಗ್ರೆಸ್‌ ಪಕ್ಷ ಸೇರುವುದಾದರೆ ಸ್ವಾಗತಿಸುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next