Advertisement
1995ರಲ್ಲಿ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಆರೋಪಿಗಳು ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಿದ್ದರು. ಈ ಪ್ರಕರಣದ ಮೂರನೇ ಆರೋಪಿಯಾಗಿದ್ದ ಕೃಷ್ಣ ಭಂಡಾರಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ನ್ಯಾಯಾಲಯಕ್ಕೂ ಹಾಜರಾಗಿರಲಿಲ್ಲ. ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ಟಿ.ವಿ. ಅವರ ಮಾರ್ಗದರ್ಶನದಲ್ಲಿ ಸಿಬಂದಿ ಪ್ರಸನ್ನ ಸಿ., ಇಮ್ರಾನ್ ಅವರು ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿ ಕುಂದಾಪುರದಿಂದ ಆತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ. Advertisement
Arrested: 29 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿ ಬಂಧನ
09:40 PM Aug 03, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.