Advertisement

Kaup: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

01:37 AM Oct 25, 2024 | Team Udayavani |

ಕಾಪು: ಪ್ರಕರಣ ವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದಿಂದ ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಅಶ್ಮತ್‌ ಅಲಿ(35)ಯನ್ನು ಕಾಪು ಪೊಲೀಸರು ಅ. 22ರಂದು ಕೇರಳದ ಕಣ್ಣೂರು ಏರ್‌ಪೋರ್ಟ್‌ನಲ್ಲಿ ಬಂಧಿಸಿದ್ದಾರೆ.

Advertisement

ಆರೋಪಿ ವಿರುದ್ಧ 2019ರಲ್ಲಿ ಕಾಪು ಪೊಲೀಸ್‌ ಠಾಣೆಯಲ್ಲಿ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿ ಅದನ್ನು ವೀಡಿಯೋ ಮಾಡಿ ಬ್ಲಾಕ್‌ಮೇಲ್ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಈತ ಉಡುಪಿಯ 2ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ 2019ರ ಸೆ. 6ರಂದು ಜಾಮೀನು ಪಡೆದು ಬಿಡುಗಡೆಯಾಗಿದ್ದ.

ಈತನ ವಿರುದ್ಧ 18 ಬಾರಿ ಬಂಧನ ವಾರಂಟ್‌ ಹೊರಡಿಸಲಾಗಿತ್ತು. ಅ. 21ರಂದು ಈತ ಕಣ್ಣೂರು ಮಟ್ಟನೂರ್‌ ಏರ್‌ಪೋರ್ಟ್‌ಗೆ ಬಂದಿಳಿದಿದ್ದ ಬಗ್ಗೆ ಮಾಹಿತಿ ಬಂದಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next