ಪಿರಿಯಾಪಟ್ಟಣ: ಕೇಂದ್ರ ಸರಕಾರದ ಜನಪರ ಯೋಜನೆಗಳು ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಸಹಕಾರಿಯಾಗಲಿದೆ ಎಂದು ಕೇಂದ್ರ ಸಚಿವ ಮಾನ್ಸೂನ್ ಮಾಂಡವಿ ತಿಳಿಸಿದರು.
ಪಟ್ಟಣ ತಾಲೂಕಿನ ರಾವಂದೂರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಮಂಜುನಾಥ್ ಪರ ಮತ ಯಾಚಿಸಿದರು. ರಾಜ್ಯದಲ್ಲಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಿಂದ ಕೂಡಿದೆ. ಕಳೆದ ಬಾರಿ ಯಡಿಯೂರಪ್ಪನವರ ಸರಕಾರದ ಜನಪರ ಯೋಜನೆಗಳಿಂದ ಈ ಬಾರಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ. ಪಿರಿಯಾಪಟ್ಟಣ ತಾಲೂಕಿನ ಅಭಿವೃದ್ಧಿಯ ದೃಷ್ಟಿಯಿಂದ ಹಿಂದುಳಿದ ವರ್ಗದ ಯುವಕನನ್ನು ಪಕ್ಷದ ಅಭ್ಯರ್ಥಿಯಾಗಿ ಮಾಡಲಾಗಿದೆ. ಅವರಿಗೆ ಅವಕಾಶ ನೀಡಬೇಕು ಎಂದರು.
ಮಾಜಿ ಶಾಸಕ ಎಚ್.ಸಿ.ಬಸವರಾಜು ಮಾತನಾಡಿ, ಇಡೀ ಪ್ರಪಂಚವೇ ಮೆಚ್ಚುವಂತಹ ಕೆಲಸವನ್ನು ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ರಾಜ್ಯದಲ್ಲಿ ಈ ಬಾರಿ ಸರಕಾರ ರಚಿಸಲಿದೆ. ನಾನು ಶಾಸಕನಾಗಿದ್ದಾಗ ಮಾಡಿದ್ದ ಅಭಿವೃದ್ಧಿ ಕಾರ್ಯಗಳನ್ನು ಹೊರತುಪಡಿಸಿದರೆ ಈವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದರು.
ಅಭ್ಯರ್ಥಿ ಎಸ್.ಮಂಜುನಾಥ್ ಮಾತನಾಡಿದರು. ಜಿಲ್ಲಾಧ್ಯಕ್ಷ ಕೋಟೆ ಶಿವಣ್ಣ, ವಿಕ್ರಂ, ಬೆಮ್ಮತ್ತಿ ಕೃಷ್ಣಾ, ಆರ್.ಟಿ.ಸತೀಶ್, ಶಿವಸ್ವಾಮಿ ಇದ್ದರು.
ಬೈಕ್‌ಗಳ ವಶ: ರಾವಂದೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮತ್ತಿತರ ಮುಖಂಡರು ಅನುಮತಿ ಪಡೆಯದೇ ಏಕಾಏಕಿ ಬೈಕ್ ರ್ಯಾಲಿ ನಡೆಸಿದ ಆರೋಪದ ಮೇಲೆ 9 ಬೈಕ್‌ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಾಗಿದೆ. ಉಪವಿಭಾಗಾಧಿಕಾರಿ ನಿತೀಶ್, ಡಿವೈಎಸ್‌ಪಿ ಭಾಸ್ಕರ್ ರೈ, ಎಆರ್‌ಟಿಒ ಗಂಗಾಧರಪ್ಪ, ಸರ್ಕಲ್ ಇನ್ಸ್‌ಪೆಕ್ಟರ್ ಪ್ರದೀಪ್ ತಪಾಸಣೆ ನಡೆಸಿದರು.