Advertisement
ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರದ ಮಾಡಿದ ಆರೋಪ ಸಂಬಂಧ ತನ್ನ ವಿರುದ್ಧ ಪೊಲೀಸರು ದಾಖಲಿಸಿರುವ ದೋಷಾರೋಪ ಪಟ್ಟಿ ಮತ್ತು ಪ್ರಕರಣ ಕುರಿತ ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ 23 ವರ್ಷದ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
Related Articles
Advertisement
ಅಲ್ಲದೇ, ಸಂತ್ರಸ್ತೆಯು 2020ರ ಅಕ್ಟೋಬರ್ ನಲ್ಲಿ ಆರೋಪಿಯನ್ನು ಮದುವೆಯಾಗಿದ್ದಾರೆ. ಅದೇ ದಿನ ಅವರ ಮದುವೆ ನೋಂದಣಿಯಾಗಿದೆ. 2021ರ ಡಿಸೆಂಬರ್‌ನಲ್ಲಿ ದಂಪತಿಗೆ ಹೆಣ್ಣು ಮಗು ಜನಿಸಿದೆ. ಹಾಗಾಗಿ, ಅರ್ಜಿದಾರನ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಮುಂದುವರಿಸಿವುದು ಅರ್ಥಹೀನ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್, ಅರ್ಜಿದಾರನ ವಿರುದ್ಧದ ಅಪಹರಣ, ಅತ್ಯಾಚಾರ ಮತ್ತು ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ದೋಷಾರೋಪ ಪಟ್ಟಿ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸಿ ಆದೇಶಿಸಿದೆ.
ಸಂತ್ರಸ್ತೆಯ ತಂದೆ ತನ್ನ 17 ವರ್ಷದ ಪುತ್ರಿ ನಾಪತ್ತೆಯಾಗಿದ್ದಾಳೆ ಎಂದು ತಿಳಿಸಿ 2019ರ ಮಾರ್ಚ್ ನಲ್ಲಿ ಬನ್ನೇರುಘಟ್ಟ ಠಾಣಾ ಪೋಲೀಸರಿಗೆ ದೂರು ದಾಖಲಿಸಿದ್ದರು. ತನಿಖೆ ನಡೆಸಿದ್ದ ಪೊಲೀಸರು, ಅರ್ಜಿದಾರನ ವಿರುದ್ಧ ಅಪಹರಣ, ಅತ್ಯಾಚಾರ ಮತ್ತು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಪೋಕ್ಸೋ ಕಾಯ್ದೆಯಡಿ ಅಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅದನ್ನು ರದ್ದುಪಡಿಸುವಂತೆ ಕೋರಿ 2022ರ ಜುಲೈನಲ್ಲಿ ಅರ್ಜಿದಾರ ಹೈಕೋರ್ಟ್ ಮೆಟ್ಟಿಲೇರಿದ್ದರು.