Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಮುಂಗಾರು ಹಾಗೂ ಮುಂಗಾರು ಮುಂಚಿತವಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಮತ್ತು ಇನ್ನಿತರ ವಿಷಯಗಳ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಮಳೆ ಸುರಿಯುವ ಮುನ್ನ ನಗರ ಹಾಗೂ ಗ್ರಾಮಗಳಲ್ಲಿನ ಚರಂಡಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಇದರಿಂದ ನೀರು ಸರಾಗವಾಗಿ ಹರಿದು ಹೋಗಲು ಅನುಕೂಲವಾಗುತ್ತದೆ. ಇನ್ನು ನಗರಸಭೆ ಮತ್ತು ಪುರಸಭೆ ಹಾಗೂ ಗ್ರಾಮಗಳಲ್ಲಿನ ಸರ್ಕಾರಿ ಕಚೇರಿ ಆವರಣಗಳಲ್ಲಿ ಗಿಡ ನೆಡಲು ಕ್ರಮ ವಹಿಸಬೇಕು. ಮುಖ್ಯವಾಗಿ ಆವರಣ ಗೋಡೆ ಇದ್ದ ಸ್ಥಳಗಳಲ್ಲಿ ಗಿಡ ನೆಡಲು ಆದ್ಯತೆ ನೀಡುವುದಲ್ಲದೆ, ಅವುಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳವರು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಮೇ ತಿಂಗಳ ಕೊನೆಯಲ್ಲಿದ್ದರೂ ಬಿಸಿಲಿನ ತಾಪಮಾನ ಕಡಿಮೆಯಾಗಿಲ್ಲ. ಹಾಗಾಗಿ, ಬಿಸಿಲು ನಿರ್ವಹಣೆಗೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಬಿಸಿಲಿನಿಂದ ಉಂಟಾಗುವ ತೊಂದರೆಗಳಿಗೆ ಉಪಚರಿಸಲು ಜಿಲ್ಲಾಸ್ಪತ್ರೆ ಸೇರಿದಂತೆ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಪ್ರಮುಖ ಔಷಧಗಳನ್ನು ದಾಸ್ತಾನು ಇಟ್ಟುಕೊಂಡಿರಬೇಕು. ಕಾರ್ಮಿಕರಿಗೆ ಬೆಳಗ್ಗೆ ಮತ್ತು ಸಂಜೆ ಹೊತ್ತಿನಲ್ಲಿ ಕೆಲಸ ಮಾಡಲು ತಿಳಿಸಬೇಕು. ಹೆಚ್ಚು ಬಿಸಿಲು ಇದ್ದಾಗ ಹೊರಗಡೆ ಓಡಾಡದಂತೆ ಸಲಹೆ ನೀಡಬೇಕು. ಅಲ್ಲದೆ, ಈ ಬಗ್ಗೆ ಗ್ರಾಮ ಪಂಚಾಯಿತಿಗಳ ಮೂಲಕ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
535 ಹುದ್ದೆಗಳಿಗೆ 338 ಅರ್ಜಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಮೇ 25, 26ರಂದು ಮತ್ತು ಜೂನ್ 1 ಹಾಗೂ 2ರಂದು ಯಾದಗಿರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಹೈದ್ರಾಬಾದ್ ಕರ್ನಾಟಕ ವೃಂದದ 535 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ, ಕೇವಲ 338 ಅರ್ಜಿಗಳು ಬಂದಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ ಬಿರಾದಾರ ಸಭೆಯಲ್ಲಿ ಮಾಹಿತಿ ನೀಡಿದರು. ಟಿ.ಇ.ಟಿ ಪಾಸಾದ ಡಿ.ಇಡಿ ಪದವೀಧರರಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇತ್ತು. ಹೈದ್ರಾಬಾದ್ ಕರ್ನಾಟಕ ಹೊರತುಪಡಿಸಿ ಶೇ. 20ರಷ್ಟು ಮೀಸಲಾತಿ ಹುದ್ದೆಗಳಿಗೆ ಸಾಕಷ್ಟು ಅರ್ಜಿಗಳು ಬಂದಿವೆ. ಆದರೆ, ಹೈ.ಕ ಭಾಗದ ಶೇ. 80ರಷ್ಟು ಸ್ಥಳೀಯ ವೃಂದದ ಮೀಸಲಾತಿಯ ಹುದ್ದೆಗಳಿಗೆ ಖಾಲಿ ಇರುವ ಹುದ್ದೆಗಳಿಗೆ ತಕ್ಕಷ್ಟು ಕೂಡ ಅರ್ಜಿ ಸಲ್ಲಿಕೆಯಾಗಿಲ್ಲ. ಹಾಗಾಗಿ, ಡಿ.ಇಡಿ ಮತ್ತು ಬಿ.ಇಡಿ ಅಭ್ಯರ್ಥಿಗಳಿಗೆ ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ವಿಷಯ ತಜ್ಞರಿಂದ ಉಚಿತ ಕೋಚಿಂಗ್ ಕೊಡಿಸಲು ಕ್ರಿಯಾಯೋಜನೆ ರೂಪಿಸಿ, ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು. ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಮಾತನಾಡಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ರೀತಿ ಅಕ್ರಮ ನಡೆಯದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕಾರ್ಯಗಳಿಗಾಗಿ ನೇಮಕಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರ ಕೇಂದ್ರದಲ್ಲಿ ಇರತಕ್ಕದ್ದು. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ತರಹದ ಕೈ ಗಡಿಯಾರ, ಕ್ಯಾಲ್ಕು ್ಯಲೇಟರ್ ಹಾಗೂ ಮೊಬೈಲ್ ತರುವುದನ್ನು ಕಡ್ಡಾಯವಾಗಿ ನಿಷೇಧಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಸಂತ ವಿ. ಕುಲಕರ್ಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಾ| ವಿ. ಮುನಿರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಹಬೀಬ ಉಸ್ಮಾನ್ ಪಟೇಲ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಸಂಜೀವ್‌ಕುಮಾರ ರಾಯಚೂರಕರ್, ಪೌರಾಯುಕ್ತ ರಮೇಶ ಸುಣಗಾರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ರಾಜ್‌ಕುಮಾರ್ ಪತ್ತಾರ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ| ಶರಣಭೂಪಾಲರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.