ಅರಸೀಕೆರೆ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ವಾರ್ಷಿಕವಾಗಿ 600 ಕೋಟಿ ರೂ. ನಷ್ಟ ಅನುಭವಿಸುತ್ತಿದೆ. ಈ ನಷ್ಟವನ್ನು ಸರಿದೂಗಿಸಿ ಸಂಸ್ಥೆಯನ್ನು ಸ್ವಾವಲಂಬಿಯಾಗಿ ಬೆಳೆಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾಲ್ಕು ವಿಭಾಗಗಳಿಂದಲೂ ಸೇರಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರತಿ ವರ್ಷ 600 ಕೋಟಿ ರೂ.ಗೂ ಹೆಚ್ಚಿನ ನಷ್ಟ ಅನುಭವಿ ಸುತ್ತಿದೆ. ಈ ನಷ್ಟವನ್ನು ಸರಿದೂಗಿಸಿ ಆರ್ಥಿಕವಾಗಿ ಸಂಸ್ಥೆಯನ್ನು ಬೆಳೆಸುವ ದೃಷ್ಠಿಯಿಂದ ಆದಾಯ ಸೋರಿಕೆ ಮೂಲವನ್ನು ಪತ್ತೆ ಮಾಡಿ ಕಠಿಣ ಕ್ರಮಗಳನ್ನು
ಕೈಗೊಳ್ಳಲಾಗುವುದು.
ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದಲ್ಲಿನ ಎಲ್ಲಾ ಘಟಕಗಳ ಮೇಲೆ ಸೋಲಾರ್ ಪ್ಯಾ$Éಂಟ್‌ಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದನೆ ಮಾಡುವ ಮೂಲಕ 1,500 ಕೋಟಿ ರೂ.ಆದಾಯ ಬರುವಂತೆ ಕ್ರಮ ಕೈಗೊಳ್ಳಲಾಗುವುದು. ಬಸ್ ನಿಲ್ದಾಣಗಳಲ್ಲಿ ವಾಣಿಜ್ಯ ಸಂಕೀರ್ಣವನ್ನು ನಿರ್ಮಾಣ ಮಾಡುವ ಮೂಲಕ ಸಂಸ್ಥೆಗೆ ಹೆಚ್ಚಿನ ಆದಾಯ ಬರುವಂತೆ ಮಾಡಲಾಗುವುದು. ಟ್ರ್ಯಾಕಿಂಗ್ ವ್ಯವಸ್ಥೆಯ ಮೂಲಕ ಪ್ರತಿಯೊಂದು ಬಸ್‌ನ ಆದಾಯ ಮತ್ತು ನಿರ್ವಹಣೆಯ ಖರ್ಚು-ವೆಚ್ಚಗಳನ್ನು ಪರಿಶೀಲನೆ ಮಾಡಲಾಗುವುದು ಎಂದರು.
ದುಬಾರಿ ಬೆಲೆಯ ವೋಲ್ವೊ ಬಸ್ಸಿನ ಖರೀದಿಗೆ ಈಗಾಗಲೇ ಕಡಿವಾಣ ಹಾಕಲಾಗಿದೆ.ಗ್ರಾಮೀಣ ಪತ್ರಕರ್ತರಿಗೆ ಬಸ್‌ಪಾಸ್ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಅವರು ತಿಳಿಸಿದರು.