Advertisement

ಶಸ್ತ್ರಾಸ್ತ್ರ ಖರೀದಿ ಸರಳಗೊಳಿಸಲು ಕ್ರಮ

06:00 AM May 23, 2018 | Team Udayavani |

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಸೇನಾ ಶಸ್ತ್ರಾಸ್ತ್ರಗಳ ಖರೀದಿ ಪ್ರಕ್ರಿಯೆಯನ್ನು ಸರಳಗೊಳಿಸುವ ನಿಟ್ಟಿನಲ್ಲಿ ರಕ್ಷಣಾ ಸಚಿವಾಲಯ ಹಲವು ಕ್ರಮಗಳನ್ನು ಕೈಗೊಂಡಿದೆ. ಸಚಿವೆ ನಿರ್ಮಲಾ ಸೀತಾರಾಮನ್‌ ಅಧ್ಯಕ್ಷತೆಯಲ್ಲಿ ನಡೆದ ರಕ್ಷಣಾ ಖರೀದಿ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಖರೀದಿ ಪ್ರಕ್ರಿಯೆಯಲ್ಲಾಗುವ ವಿಳಂಬ ತಡೆ, ಸೇವಾ ಪ್ರಧಾನ ಕಚೇರಿಗಳಿಗೆ ಹೆಚ್ಚಿನ ಹಣಕಾಸು ಅಧಿಕಾರ, ಹಂತ ಹಂತದ ಖರೀದಿ ಪ್ರಕ್ರಿಯೆಗೆ ಕಡಿವಾಣ ಸೇರಿದಂತೆ ಹಲವು ಕ್ರಮಗಳಿಗೆ ಒಪ್ಪಿಗೆ ನೀಡಲಾಗಿದೆ. ಈ ಹೊಸ ನಿಯಮಗಳನ್ನು ಹೊಸ ರಕ್ಷಣಾ ಖರೀದಿ ನೀತಿಯಲ್ಲಿ ಸೇರಿಸಲು ನಿರ್ಧರಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next