Advertisement
ಕಲಬುರಗಿ-ಸೇಡಂ ರಸ್ತೆಯ ಶ್ರೀನಿವಾಸ ಸರಡಗಿ ಗ್ರಾಮದ ಬಳಿ 109 ಕೋಟಿ ರೂ. ವೆಚ್ಚದಿಂದ ನಿರ್ಮಿಸಲಾಗುತ್ತಿರುವ ಕಲಬುರಗಿ ವಿಮಾನ ನಿಲ್ದಾಣದ ಕಾಮಗಾರಿ 10-11 ತಿಂಗಳಲ್ಲಿ ಪೂರ್ಣಗೊಂಡು ಕಾರ್ಯಾರಂಭ ಮಾಡಲಿದೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
Related Articles
Advertisement
ಈ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟದ ಅನುಮೋದನೆಯನ್ನು ಪಡೆಯಲಾಗುವುದು. ವಿಮಾನ ನಿಲ್ದಾಣದ ಕಾಮಗಾರಿಗೆ ಯಾವುದೇ ಹಣಕಾಸಿನ, ಭೂಮಿಯ ಹಾಗೂ ತಾಂತ್ರಿಕ ಸಮಸ್ಯೆ ಇಲ್ಲ. ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಕಲಬುರಗಿ ಜನತೆಯ ವಿಮಾನ ಹಾರಾಟದ ಕನಸು ಸಾಕಾರಗೊಳಿಸಬೇಕಾಗಿದೆ ಎಂದು ಹೇಳಿದರು.
ಸಂಸದರ ಜತೆಗೆ ಆಗಮಿಸಿದ್ದ ಶ್ರೀನಿವಾಸ ಸರಡಗಿ ಗ್ರಾಮದವರೇ ಆಗಿರುವ ಡಿಸಿಸಿ ಬ್ಯಾಂಕ್‌ನ ಹಿಂದಿನ ಅಧ್ಯಕ್ಷ ಸೋಮಶೇಖರ ಗೋನಾಯಕ ಅವರೊಂದಿಗೆ ರಾಜ್ಯ ಹೆದ್ದಾರಿಯಿಂದ ಶ್ರೀನಿವಾಸ ಸರಡಗಿ ಗ್ರಾಮದವರೆಗಿನ ರಸ್ತೆ ಅಗಲೀಕರಣ ಹಾಗೂ ಇತರ ಅಭಿವೃದ್ಧಿ ವಿಷಯಗಳ ಕುರಿತು ಚರ್ಚಿಸಿದರು. ಇದೇ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಬುರಾವ ರಾಠೊಡ, ಯುವ ಮುಖಂಡ ಚೇತನ ಗೋನಾಯಕ ಇದ್ದರು.
ಗ್ರಾಮೀಣ ಕ್ಷೇತ್ರದ ಶಾಸಕ ಜಿ. ರಾಮಕೃಷ್ಣ, ಪ್ರಾದೇಶಿಕ ಆಯುಕ್ತ ಅಮ್ಲನ್ ಆದಿತ್ಯ ಬಿಸ್ವಾಸ್, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಧಿಕಾರದ ಅಧಿಧಿಕಾರಿ ಬೂವರಹನ್, ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಪ್ರಮೋದರೆಡ್ಡಿ, ಸೂಪರಿಟೆಂಡೆಂಟ್ ಇಂಜಿನಿಯರ್ ಪ್ರಕಾಶ ಶ್ರೀಹರಿ, ಕಾರ್ಯನಿರ್ವಾಹಕ ಇಂಜಿನಿಯರ್ ಮಹ್ಮದ್ ಅಜೀಜುದ್ದೀನ್ ಈ ಸಂದರ್ಭದಲ್ಲಿದ್ದರು.