Advertisement

ಮೊದಲ ನದಿ ಜೋಡಣೆ ಯೋಜನೆಗೆ ಹಸಿರು ನಿಶಾನೆ

09:32 AM Jan 14, 2017 | |

ಹೊಸದಿಲ್ಲಿ: ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರಕಾರದ ಮಹತ್ವಾಕಾಂಕ್ಷಿ ಯೋಜನೆ  ಕೆನ್‌ – ಬೆತ್ವಾ ನದಿ ಜೋಡಣೆ ಕಾರ್ಯಕ್ರಮಕ್ಕೆ ಪರಿಸರ ಆಯೋಗ ಹಾಗೂ ಬುಡಕಟ್ಟು ಸಚಿವಾಲಯಗಳ ಅನುಮೋದನೆ ಸಿಕ್ಕಿದೆ. ಇದರಿಂದಾಗಿ ದೇಶದ ಮೊದಲ ಅಂತಾರಾಜ್ಯ ನದಿ ಜೋಡಣೆ ಯೋಜನೆಗೆ ಇದ್ದ ತೊಡಕು ಬಹುತೇಕ ನಿವಾರಣೆಯಾದಂತಾಗಿವೆ.

Advertisement

ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಮತ ದಾನಕ್ಕೆ ದಿನಗಣನೆ ಆರಂಭವಾಗಿರುವಾಗಲೇ ಯೋಜನೆಗೆ ಅನುಮತಿ ಸಿಕ್ಕಿರುವುದು, ಯೋಜನೆಗೆ ಚಾಲನೆ ನೀಡಿದ್ದ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ನೆರವಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗಿದೆ.

ಉತ್ತರಪ್ರದೇಶ ಹಾಗೂ ಮಧ್ಯಪ್ರದೇಶದಲ್ಲಿ ಹರಡಿ ಕೊಂಡಿರುವ ಬರಪೀಡಿತ ಬುಂದೇಲ್‌ಖಂಡ ಪ್ರದೇಶಕ್ಕೆ ಕುಡಿಯುವ ನೀರು ಮತ್ತು 6.35 ಲಕ್ಷ ಹೆಕ್ಟೇರ್‌ ಜಮೀನಿಗೆ ನೀರೊದಗಿಸುವ 9,393 ಕೋಟಿ ರೂ. ವೆಚ್ಚದ ಕೆನ್‌- ಬೆತ್ವಾ ನದಿ ಜೋಡಣೆ ಯೋಜನೆಗೆ ಪರಿಸರ ಪರಿಶೀಲನಾ ಸಮಿತಿ ಹಾಗೂ ಬುಡಕಟ್ಟು ಸಚಿವಾಲಯಗಳು ಅನುಮತಿ ಕೊಟ್ಟಿವೆ ಎಂದು ಜಲಸಂಪನ್ಮೂಲ ಸಚಿವೆ ಉಮಾಭಾರತಿ  ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next