ಬೆಂಗಳೂರು: ಕೆಲಸಕ್ಕೆ ಹಾಜರಾದ ಬಗ್ಗೆ ನಕಲಿ ದಾಖಲೆಗಳನ್ನು ತೋರಿಸಿ ಪೌರಕಾರ್ಮಿಕರಿಗೆ ಪಾವತಿಸಿದಬೇಕಿದ್ದ ಸುಮಾರು 550 ಕೋಟಿ ರೂ ಇಎಸ್‌ಐ ಹಾಗೂ ಪಿಎಫ್ ಹಣ ದುರ್ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಹಾಗೂ ದಾಖಲೆ ಒದಗಿಸುವಂತೆ ಸೂಚಿಸಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಜಾರಿಗೊಳಿಸಿದ್ದ ನೋಟಿಸ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಬಿಬಿಎಂಪಿ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ಮಹದೇವಪುರ ವಲ¿ ಜಂಟಿ ಆಯುಕ್ತೆ ಡಾ.ವಾಸಂತಿ ಅಮರ್ ಸೇರಿದಂತೆ 46 ಮಂದಿ ಬಿಬಿಎಂಪಿ ಅಧಿಕಾರಿಗಳು ಸಲ್ಲಿಸಿದ ಅರ್ಜಿಗಳನ್ನು ವಜಾಗೊಳಿಸಿದ ನ್ಯಾ. ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣಕ್ಕೆ ಸಂಬಂದಿಸಿದಂತೆ ಎಸಿಬಿ ಕೋರಿರುವ ಮಾಹಿತಿ ಹಾಗೂ ದಾಖಲೆಗಳನ್ನು ಒದಗಿಸುವಂತೆ ಅರ್ಜಿದಾರ ಅಧಿಕಾರಿಗಳಿಗೆ ಸೂಚಿಸಿದೆ.
ಪೌರಕಾರ್ಮಿಕರಿಗೆ ಇಎಸ್‌ಐ ಹಾಗೂ ಪಿಎಫ್ಐ ಸೌಲಭ ಒದಗಿಸಲು ಅವರ ವೇತನದಲ್ಲಿ ವಂತಿಗೆ ಕಡಿತಗೊಳಿಸಲಾಗಿತ್ತು. ಅದಕ್ಕೆ ಬಿಬಿಎಂಪಿ ತನ್ನ ಪಾಲು ಸೇರಿಸಿತ್ತುàಕಾಗಿತ್ತು. ಈ ರೀತಿ ಸಂಗ್ರಹವಾದ ಸುಮಾರು 550 ಕೋಟಿ ರೂ.ಗಳನ್ನು ಬಿಬಿಎಂಪಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸಂಬಂಧಪಟ್ಟ ಬ್ಯಾಂಕ್ ಖಾತೆಗೆ ಜಮಾ ಮಾಡದೇ ಲಪಟಾಯಿಸಿದ್ದಾರೆ ಎಂದು ಆರೋಪಿಸಿ ಕುರಿತು ತನಿಖೆ ನಡೆಸುವಂತೆ ಕೋರಿ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ನಾರಾಯಣ ಅವರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.
ಅದರಂತೆ 2017ರಲ್ಲಿ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ನಂತರ ತನಿಖೆಯನ್ನು ಎಸಿಬಿಗೆ ವರ್ಗಾಯಿಸಲಾಗಿತ್ತು. ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿದ್ದ ಎಸಿಬಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಮಾಹಿತಿ ಹ ಹಾಗೂ ದಾಖಲೆಗಳನ್ನು ಒದಗಿಸುವಂತೆ ಬಿಬಿಎಂಪಿಯ ಎಲ್ಲ ವಲಯಗಳ ಜಂಟಿ ಆಯುಕ್ತರು, ಎಂಜಿನಿಯರ್‌ಗಳಿಗೆ ನೋಟಿಸ್ ಜಾರಿ ಮಾಡಿತ್ತು. ಈ ನೋಟಿಸ್ ಪ್ರಶ್ನಿಸಿ ಅಧಿಕಾರಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.