Advertisement

ರೆಡ್ಡಿ ಬಂಧನದ ಹಿಂದೆ ರಾಜ್ಯ ಸರ್ಕಾರದ ಕೈವಾಡ

06:45 AM Nov 18, 2018 | Team Udayavani |

ಯಲಬುರ್ಗಾ: ಆ್ಯಂಬಿಡೆಂಟ್‌ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಬಂಧಿಸಿರುವುದರಲ್ಲಿ ರಾಜ್ಯ ಸರ್ಕಾರದ ಕೈವಾಡವಿದೆ ಎಂದು ಶಾಸಕ ಶ್ರೀರಾಮುಲು ಆರೋಪಿಸಿದರು. 

Advertisement

ತಾಲೂಕಿನ ಚಿಕ್ಕವಂಕಲಕುಂಟಾ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ್ಯಂಬಿಡೆಂಟ್‌ ಪ್ರಕರಣದಲ್ಲಿ ವಿನಾಕಾರಣ ಜನಾರ್ದನ ರೆಡ್ಡಿ ಅವರನ್ನು ಬಂಧಿ ಸಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜಕೀಯ ಸೇಡು ತೀರಿಸಿಕೊಂಡಿದ್ದಾರೆ. ಯಡಿಯೂರಪ್ಪ, ಜಗದೀಶ ಶೆಟ್ಟರ್‌ ಸೇರಿ ಹಲವು ಬಿಜೆಪಿ ನಾಯಕರು ರೆಡ್ಡಿಯವರಿಗೆ ಬೆಂಬಲ ನೀಡಿದ್ದಾರೆ. 

ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ಗೆ ಇ.ಡಿ. ನೋಟಿಸ್‌ ನೀಡಿದ್ದು ಬಿಜೆಪಿಗೆ ಸಂಬಂಧವಿಲ್ಲ ಎಂದು ತಿಳಿಸಿದರು. ಯಾವುದೇ ಕಾರಣಕ್ಕೂ ತಾನು ಕಾಂಗ್ರೆಸ್‌ ಪಕ್ಷಕ್ಕೆ ಹೋಗುವುದಿಲ್ಲ. ತನ್ನ ರಾಜಕೀಯ ಏಳ್ಗೆ ಸಹಿಸದ ಕೆಲವರು ಇಂತಹ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ರಾಜ್ಯದ ಜನತೆಯ ಆಶೀರ್ವಾದದಿಂದ ಶ್ರೀರಾಮುಲು ಇಂದು ದೊಡ್ಡ ಶಕ್ತಿ, ವ್ಯಕ್ತಿಯಾಗಿ ಬೆಳೆದು ನಿಲ್ಲಲು ಸಾಧ್ಯವಾಗಿದೆ. ತಾನು ಪ್ರಬಲ ನಾಯಕನಾಗಲು ಬಿಜೆಪಿ ಕಾರಣ, ಯಾವುದೇ ಕಾರಣಕ್ಕೂ ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ ಎಂದರು.

ಇದಕ್ಕೂ ಮುನ್ನ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಸನ್ನಾನಂದಪುರಿ ಸ್ವಾಮೀಜಿ, ಸಿಎಂ ಕುಮಾರಸ್ವಾಮಿ ಅವರು ಪರಿಶಿಷ್ಟ ಪಂಗಡದ ಅಭಿವೃದ್ಧಿ ಬಗ್ಗೆ ನಿರ್ಲಕ್ಷ Â ವಹಿಸಿದ್ದಾರೆ. ಶೋಷಿತ ಸಮುದಾಯಗಳ ಪ್ರಗತಿಗೆ ಆದ್ಯತೆ ನೀಡುತ್ತಿಲ್ಲ. ಮುಂಬರುವ ದಿನಗಳಲ್ಲಿ ಶೋಷಿತ ಸಮುದಾಯಗಳು ತಕ್ಕಪಾಠ ಕಲಿಸಲಿವೆ ಎಂದು ಎಚ್ಚರಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next