Advertisement
ಅರ್ಜಿದಾರರ ಪರ ವಾದಮಂಡಿಸಿದ ಹಿರಿಯ ವಕೀಲ ಎಂ.ಟಿ ನಾಣಯ್ಯ, ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ನಮ್ಮ ಕಕ್ಷಿದಾರರಿಗೆ ಎಸ್‌ಐಟಿ ನೋಟಿಸ್ ಜಾರಿಗೊಳಿಸಿದೆ. ಈ ಹಿಂದೆ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾಗೂ,ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿದ್ದ ವೇಳೆ ಅವರನ್ನು ಬಂಧಿಸಲಾಗಿತ್ತು. ಹೀಗಾಗಿ ತಮ್ಮ
ಕಕ್ಷಿದಾರರನ್ನೂ ವಿಚಾರಣೆ ನೆಪದಲ್ಲಿ ಬಂಧಿಸುವ ಸಾಧ್ಯತೆಯಿದ್ದು ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿದರು. ಈ ವಾದ ಆಲಿಸಿದ ನ್ಯಾಯಪೀಠ, ಈ ಅರ್ಜಿ ಸಂಬಂಧ ಮೊದಲು ಎಸ್‌ಐಟಿ ಆಕ್ಷೇಪಣೆ ಸಲ್ಲಿಸಲಿ, ಮುಂದಿನ ವಿಚಾರಣೆ ವೇಳೆ
ಪರಿಶೀಲಿಸೋಣ ಎಂದು ತಿಳಿಸಿ ವಿಚಾರಣೆ ಮುಂದೂಡಿತು.
ಬಳಿ ಆಗಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಗಂಗಾರಾಮ್ ಬಡೇರಿಯಾ ಪುತ್ರ
ಗಗನ್ ಕೂಡ ಕಿಕ್‌ಬ್ಯಾಕ್ ಪಡೆದುಕೊಂಡಿದ್ದಾರೆ ಎಂಬ ಆರೋಪ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ಜಾರಿಗೊಳಿಸಿತ್ತು. ಹೀಗಾಗಿ ಬಂಧನ ಭೀತಿಯಿಂದ ಗಗನ್ ಬಡೇರಿಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ಜೂ.21ರಂದು ವಜಾಗೊಳಿಸಿತ್ತು.