Advertisement

ಜಿಲ್ಲೆಗೆ 247 ವಲಸೆ ಕಾರ್ಮಿಕರ ಆಗಮನ

06:22 AM May 23, 2020 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಗೆ ಕಳೆದ ಮೂರು ದಿನಗಳಿಂದ ಮಹಾರಾಷ್ಟ್ರದಿಂದ 247 ಮಂದಿ ವಲಸೆ ಕಾರ್ಮಿಕರು ಆಗಮಿಸಿದ್ದು ಎಲ್ಲರ ಆರೋಗ್ಯ ತಪಾಸಣೆಗೆ ಒಳಪಡಿಸಿದ್ದು, ಇಲ್ಲಿಯವರೆಗೆ 47 ಮಂದಿಗೆ ಕೋವಿಡ್‌ 19 ಸೋಂಕು ದೃಢಪಟ್ಟಿದೆ. 63 ಮಂದಿಯ ವರದಿ ನೆಗೆಟಿವ್‌ ಬಂದಿದೆ. ಉಳಿದ 137 ಮಂದಿ ವೈದ್ಯಕೀಯ ವರದಿಗಾಗಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

Advertisement

ನಗರದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ ನಡೆದ  ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಮಹಾರಾಷ್ಟ್ರದಿಂದ ಜಿಲ್ಲೆಗೆ ಖಾಸಗಿ ಬಸ್‌ಗಳ ಮೂಲಕ 247 ಮಂದಿ ವಲಸೆ ಕಾರ್ಮಿಕರು ಆಗಮಿಸಿದ್ದು, ಹಳೆಯ 26 ಕೋವಿಡ್‌ 19 ಪ್ರಕರಣ ಹಾಗೂ ಇಂದಿನ ಹೊಸದಾಗಿ 47 ಪ್ರಕರಣ ಸೇರಿ  ಒಟ್ಟಾರೆ ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿತರ ಸಂಖ್ಯೆ 73 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್‌-19 ಪ್ರಕರಣ ಹೆಚ್ಚುತ್ತಿದ್ದು, ಹೊರ ರಾಜ್ಯಗಳಿಂದ ಬಂದವರಲ್ಲಿ ಮಾತ್ರ ಕೋವಿಡ್‌ 19 ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ 247 ಜನರ ವಲಸೆ ಕಾರ್ಮಿಕರಲ್ಲಿ 138 ಜನ ಗೌರಿಬಿದನೂರು  ತಾಲೂಕಿನವರು ಹಾಗೂ ಬಾಗೇಪಲ್ಲಿಗೆ 109 ಜನ ವಲಸೆ ಕಾರ್ಮಿಕರು ಆಗಮಿಸಿದ್ದಾರೆ ಎಂದು ಹೇಳಿದರು.  ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ ಮಿಥುನ್‌ ಕುಮಾರ್‌, ಉಪವಿಭಾಗಾಧಿಕಾರಿ ರಘುನಂದನ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next