ನವದೆಹಲಿ : ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರ ಕ್ಕೆ ಬರುವ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆ ದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಆಪರೇಷನ್ ಮೂಲಕ ಅಧಿಕಾರಕ್ಕೆ ಬಂದರೂ ಬಿಜೆಪಿ ಏನು ಅಭಿವೃದ್ಧಿ ಕೆಲಸ ಮಾಡಿಲ್ಲ.ರಾಜ್ಯದ ಜನರು ಶಾಪ ಹಾಕುತ್ತಿದ್ದಾರೆ, ಕಣ್ಣಿರಲ್ಲಿ ಕೈತೊಳೆಯುತ್ತಿದ್ದಾರೆ.ಕೊವೀಡ್ ಅನ್ನು ಸರಿಯಾಗಿ ನಿಭಾಯಿಸದ ನಿಷ್ಕ್ರಿಯ ಸರ್ಕಾರ.ರಾಜ್ಯವನ್ನು ಬಿಜೆಪಿ ಆರ್ಥಿಕವಾಗಿ ದಿವಾಳಿ ಮಾಡಿದೆ ಎಂದು ಆರೋಪಿಸಿದರು.
ರಾಹುಲ್ ಗಾಂಧಿ ರಾಜ್ಯದ ನಾಯಕರ ಜೊತೆಗೆ ಸಭೆ ನಡೆಸಿದರು.ರಾಜ್ಯದ ಪರಿಸ್ಥಿತಿಗಳ ಬಗ್ಗೆ ಚರ್ಚೆ ಮಾಡಿದರು.ಚುನಾವಣೆ ತಂತ್ರಗಳನ್ನು ಮಾಡುವ ಬಗ್ಗೆ ಸಮಾಲೋಚನೆ ನಡೆಸಿದರು.ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಹೈಕಮಾಂಡ್ ಬೆಂಬಲ ನೀಡುವುದಾಗಿ ಹೇಳಿದ್ದಾರೆ.ರಾಹುಲ್ ಗಾಂಧಿ ಅವರಿಗೆ ಎಲ್ಲೂ ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ ಎನ್ನುವ ಸಂದೇಶ ಸಿಕ್ಕಿದೆ ಎಂದರು.
ಅಧ್ಯಕ್ಷರು, ಸಿಎಲ್‌ಪಿ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ ಎನ್ನುವ ಸಂದೇಶ ಸಿಕ್ಕಿದೆ.ನಾವು ಒಗ್ಗಟ್ಟಾಗಿ ಹೋರಾಡುತ್ತಿದ್ದೇವೆ.ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಬಿಜೆಪಿ ಭಿನ್ನಬಿಪ್ರಾಯಗಳಿದೆ ಎಂದು ತೋರಿಸುತ್ತಿದೆ.ನಮ್ಮ ಪಕ್ಷದಲ್ಲಿ ಆತಂರಿಕ ಪ್ರಜಾಪ್ರಭುತ್ವ ಇದೆ.ಹೀಗಾಗಿ ಸಣ್ಣಪುಟ್ಟ ವ್ಯತಾಸಗಳಿರುತ್ತೆ. ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲ ಎಂದು ಆರೋಪಿಸಿದರು.
ಈಶ್ವರಪ್ಪ ರಾಷ್ಟ್ರ ಧ್ವಜದ ಬಗ್ಗೆ ಮಾತನಾಡಿದ್ರೆ ಅದನ್ನು ಬಿಜೆಪಿ ನಾಯಕರು ಬೆಂಬಲಿಸುತ್ತಾರೆ.ಆದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ತಪ್ಪು ಎಂದು ಹೇಳಿದ್ದಾರೆ. ಇಷ್ಟೇಲ್ಲ ಆದರೂ ಸಿಎಂ, ರಾಜ್ಯಧ್ಯಕ್ಷರು ಈಶ್ವರಪ್ಪ ಅವರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ.ಈಶ್ವರಪ್ಪ ಶವ ಇಟ್ಟುಕೊಂಡು ರಾಜಕೀಯ ಮಾಡಿದ್ದಾರೆ.144 ಸೆಕ್ಷನ್ ಜಾರಿ ಇದ್ದರೂ ಶವಯಾತ್ರೆಯಲ್ಲಿ ಭಾಗಿಯಾಗಿ ಕಾನೂನು ಉಲ್ಲಂಘಿಸಿದ್ದಾರೆಅದಕ್ಕೂ ಕ್ರಮ ತೆಗೆದುಕೊಳ್ಳಬೇಕಿತ್ತು.ಕ್ರಮ ಕೈಗೊಳ್ಳದ ಹಿನ್ನಲೆ ರಾಜ್ಯಪಾಲರನ್ನು ಭೇಟಿ ಮಾಡಿ ಈಶ್ವರಪ್ಪ ವಜಾ ಮಾಡಲು ಮನವಿ ಮಾಡಿದ್ದೇವೆ ಎಂದರು.
ಮೇಕೆದಾಟು ಯೋಜನೆ ನೆನಗುದಿಗೆ ಬಿದ್ದ ಯೋಜನೆ.ನಮ್ಮ ಸರ್ಕಾರ ಡಿಪಿಆರ್ ತಯಾರು ಮಾಡಿತ್ತು.ಕೆಲವು ಪರಿಶೀಲನೆ ನಡೆಸಿ ವಾಪಸ್ ಕಳುಹಿಸಿದ್ದರು. ಆಗ ಮೈತ್ರಿ ಸರ್ಕಾರ ಇತ್ತು, ಡಿ.ಕೆ ಶಿವಕುಮಾರ್ ಮರು ಮನವಿ ಮಾಡಲಾಯಿತು.
ಕೇಂದ್ರ ಜಲ ಆಯೋಗಕ್ಕೆ ಮನವಿ ಮಾಡಿತ್ತು.ಕೇವಲ ಅರಣ್ಯ ಅನುಮತಿ ಮಾತ್ರ ಅವಶ್ಯಕತೆ ಇದೆ.ಈಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಈ ಸರ್ಕಾರ ಬಂದು 2 ವರ್ಷ ತಿಂಗಳಾಗಿದೆ. ಈ ಅವಧಿಯಲ್ಲಿ ಒಂದು ಪರಿಸರ ಅನುನತಿ ಪಡೆಯಲು ಸಾಧ್ಯವಾಗಲಿಲ್ಲ ಎಂದು ಟೀಕಿಸಿದರು.
ನಮ್ಮ ರಾಜ್ಯದಲ್ಲಿ ಮಾಡುವ ಯೋಜನೆಗೆ ಅನುಮತಿ ಪಡೆಯಲು ಬಿಜೆಪಿಗೆ ಸಾಧ್ಯವಾಗಿಲ್ಲ.ಇದನ್ನು ಡಬಲ್ ಇಂಜಿನ್ ಸರ್ಕಾರ ಎಂದು ಹೇಳಿಕೊಳ್ಳುತ್ತಾರೆ.ಈ ಯೋಜನೆಯಿಂದ ಕುಡಿಯುವ ನೀರು, ವಿದ್ಯುತ್ ಪೂರೈಕೆಯಾಗಲಿದೆ.ಬಿಜೆಪಿ ಮನಸ್ಸು ಮಾಡಿದ್ರೆ ಎರಡು ಮೂರು ತಿಂಗಳಲ್ಲಿ ಅನುಮತಿ ಪಡೆಯಬಹುದಿತ್ತು.ಈವರೆಗೂ ಅನುಮತಿ ಪಡೆದಿಲ್ಲ ಎಂದು ಟೀಕಿಸಿದರು.
ಹೀಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ಪಾದಯಾತ್ರೆ ಮಾಡುತ್ತಿದ್ದೇವೆ.ರಾಜಕೀಯ ಕಾರಣಕ್ಕೆ ಪಾದಯಾತ್ರೆ ಮಾಡುತ್ತಿಲ್ಲ ಎಂದರು.