Advertisement
ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆಯ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಮಂಗಳವಾರ ಸೌಹಾರ್ದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಲೋಕಸಭಾ ಚುನಾವಣೆ- ಮಹಿಳಾ ಬೇಡಿಕೆಗಳ ಪಟ್ಟಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
Related Articles
Advertisement
ಪತ್ರಕರ್ತೆ ಆರ್.ಪೂರ್ಣಿಮಾ ಮಾತನಾಡಿ, 1993ರಲ್ಲಿ ಬಲವಂತರಾಯ್ ಮೆಹ್ತಾ ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೊಳಿಸಲು ಮುಂದಾಗಿದ್ದರು. ಬಳಿಕ 1996ರಲ್ಲಿ ಎಚ್.ಡಿ.ದೇವೇಗೌಡ ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜಕೀಯದಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಬಗ್ಗೆ ಲೋಕಸಭೆಯಲ್ಲಿ ಮಸೂದೆ ಮಂಡಿಸಿದ್ದರು.
ಆದರೆ ಈ ಮಸೂದೆ ಇದುವರೆಗೂ ಕಾಯ್ದೆಯಾಗಿ ಅನುಷ್ಠಾನಗೊಳ್ಳದಿರುವುದು ವಿಪರ್ಯಾಸ ಎಂದು ಹೇಳಿದರು. ಸಂಸತ್ತು ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಮಸೂದೆಯನ್ನು ಆದ್ಯತೆ ಮೇಲೆ ಜಾರಿಗೊಳಿಸಬೇಕು.
ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭಾಗವಹಿಸಲು ಮಹಿಳೆಯರಿಗೆ ಇರಬಹುದಾದ ಅಸಾಂವಿಧಾನಿಕ ಅಡೆತಡೆಗಳನ್ನು ತೆಗೆದು ಹಾಕಿ ಶೇ.50 ಮೀಸಲಾತಿ ಅನುಸಾರ ಮಹಿಳೆಯರು ಚುನಾವಣೆ ಎದುರಿಸಲು ಎಲ್ಲ ಅನುಕೂಲಗಳನ್ನು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಪತ್ರಕರ್ತೆ ಡಾ.ವಿಜಯಾ, ಗಾರ್ಮೆಂಟ್ಸ್ ಲೇಬರ್ಸ್ ಯೂನಿಯನ್‌ನ ವಿ.ಪಿ.ರುಕ್ಮಿಣಿ, ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್.ಲಕ್ಷ್ಮೀ ಮತ್ತಿತರರು ಹಾಜರಿದ್ದರು.