Advertisement
ಅವರು ಇಂದು ವಕೀಲ ಸಂಘ , ಬೆಂಗಳೂರು ಇವರ ವತಿಯಿಂದ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿರುವ ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕಾ ಹಾಗೂ ಬಿ.ವಿ.ನಾಗರತ್ನ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ನ್ಯಾಯಾಂಗ ಮತ್ತು ಶಾಸಕಾಂಗದ ಮಧ್ಯೆ ಉತ್ತಮ ಸಂಬಂಧ ಇರಬೇಕು. ನ್ಯಾಯಾಂಗವೂ ಸಹ ಒಂದು ಸಂಸ್ಕೃತಿಯೇ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿಗಳು, ಸಂವಿಧಾನವು ಪ್ರಜಾಪ್ರಭುತ್ವದ ಆಧಾರ. ಪ್ರಜಾಪ್ರಭುತ್ವದ ಆಧಾರದ ಮೇಲೆ ಕಲ್ಯಾಣ ರಾಜ್ಯವನ್ನು ಸ್ಥಾಪಿಸಬೇಕೆಂದು ಸಂವಿಧಾನ ರಚಿಸಿದ ನಮ್ಮ ಹಿರಿಯರು ಹೇಳಿದ್ದಾರೆ ಎಂದರು.
ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಉನ್ನತ ಹುದ್ದೆಗೇರಿರುವುದರಿಂದ ಹೃದಯ ತುಂಬಿ ಬಂದಿದೆ ಎಂದ ಮುಖ್ಯಮಂತ್ರಿಗಳು ಅತ್ಯಂತ ವಿನಮ್ರ ಹಾಗೂ ಸರಳ ಸ್ವಭಾವದವರು. ಸಾಮಾನ್ಯರು ಅವರನ್ನು ಸುಲಭವಾಗಿ ಮಾತನಾಡಿಸಬಹುದಾಗಿತ್ತು. ಅವರು ಕರ್ನಾಟಕದ ಸಂಸ್ಕಾರವನ್ನು ಪ್ರತಿನಿಧಿಸಲಿದ್ದಾರೆ ಎನ್ನುವುದು ನಮ್ಮ ಹೆಮ್ಮೆ. ನಾಗರಿಕತೆಯೊಂದಿಗೆ ಸಂಸ್ಕೃತಿ ಉಳಿದಾಗ ಮಾತ್ರ ದೇಶ ಸುಭಿಕ್ಷವಾಗುತ್ತದೆ. ಅವರು ಭಾರತದ ಮುಖ್ಯ ನ್ಯಾಯಾಧೀಶರಾಗಲಿ ಎಂದು ಹಾರೈಸಿದರು.
Related Articles
Advertisement
ಇದೊಂದು ಅಪರೂಪದ ಸಮಾರಂಭ. ಬಹಳಷ್ಟು ಮುಖ್ಯಮಂತ್ರಿಗಳಿಗೆ ಈ ಅವಕಾಶ ಸಿಕ್ಕಿಲ್ಲ. ಕರ್ನಾಟಕದ ಇಬ್ಬರು ಶ್ರೇಷ್ಠ ನ್ಯಾಯಮೂರ್ತಿಗಳು, ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಉನ್ನತ ಹುದ್ದೆಗೆ ಏರಿರುವ ಹೊತ್ತಿನಲ್ಲಿ ಆತ್ಮೀಯವಾಗಿ ಸನ್ಮಾನಿಸುವ ನನಗೆ ಇಂಥ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯ ಎಂದರು.
ಕಾರ್ಯಕ್ರಮದಲ್ಲಿ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಸತೀಶ್ ಚಂದ್ರ ಶರ್ಮಾ, ಅಡ್ವೊಕೇಟ್ ಜನರಲ್ ಪ್ರಭುಲಿಂಗ.ಕೆ.ನಾವಡಗಿ , ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಭಾಗವಹಿಸಿದ್ದರು.