Advertisement

ಬಿಜೆಪಿ ಹೆಸರಲ್ಲಿ ಬಿಬಿಎಂಪಿ ಜಂಟಿ ಆಯುಕ್ತರಿಗೆ ಕೊಲೆ ಬೆದರಿಕೆ ಪತ್ರ

12:42 PM Jun 06, 2017 | Team Udayavani |

ಬೆಂಗಳೂರು: ವಸತಿ ಪ್ರದೇಶಗಳಲ್ಲಿರುವ ವಾಣಿಜ್ಯ ಮಳಿಗೆಗಳನ್ನು ಕೂಡಲೇ ಸ್ಥಗಿತಗೊಳಿಸುವಂತೆ ಪಾಲಿಕೆಯಿಂದ ನೋಟಿಸ್‌ ಜಾರಿ ಮಾಡುತ್ತಿರುವ ಅಧಿಕಾರಿ ಸರ್ಫರಾಜ್‌ ಖಾನ್‌ ಅವರಿಗೆ ಬಿಜೆಪಿ ಹಲಸೂರು ಘಟಕದ ಹೆಸರಿನಲ್ಲಿ ಕೊಲೆ ಬೆದರಿಕೆ ಪತ್ರ ಬಂದಿದೆ. 

Advertisement

ಪಾಲಿಕೆಯ ಘನತ್ಯಾಜ್ಯ ಮತ್ತು ಆರೋಗ್ಯ ವಿಭಾಗದ ಜಂಟಿ ಆಯುಕ್ತ ಸರ್ಫರಾಜ್‌ ಖಾನ್‌ ಅವರಿಗೆ ಅಂಚೆ ಮೂಲಕ ಪತ್ರವೊಂದು ಬಂದಿದ್ದು, ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ನೋಟಿಸ್‌ ನೀಡುವುದು ನಿಲ್ಲಿಸದಿದ್ದರೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಜತೆಗೆ ಪಾಕಿಸ್ತಾನಕ್ಕೆ ಕಳುಹಿಸುವುದಾಗಿ ಉಲ್ಲೇಖೀಸಲಾಗಿದೆ.

ಹೈಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಈಗಾಗಲೇ 1000ಕ್ಕೂ ಹೆಚ್ಚು ವಸತಿ ಪ್ರದೇಶಗಳಲ್ಲಿನ ವಾಣಿಜ್ಯ ಮಳಿಗೆಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ನಗರದಲ್ಲಿ 5 ಸಾವಿರಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ವಸತಿ ಪ್ರದೇಶದಲ್ಲಿದ್ದು, ಅವುಗಳಿಗೆ  ನೋಟಿಸ್‌ ಜಾರಿಗೊಳಿಸುವ ಜವಾಬ್ದಾರಿಯನ್ನು ಸರ್ಫರಾಜ್‌ ಖಾನ್‌ ವಹಿಸಿಕೊಂಡಿದ್ದಾರೆ. ಆ ಹಿನ್ನೆಲೆಯಲ್ಲಿ ಅವರಿಗೆ ಬಿಜೆಪಿ ಹಲಸೂರು ಘಟಕದ ಹೆಸರಿನಲ್ಲಿ ಬೆದರಿಕೆ ಪತ್ರ ಬಂದಿದೆ. 

ಈ ಕುರಿತು ಪ್ರತಿಕ್ರಿಯಿಸಿದ ಸರ್ಫರಾಜ್‌ ಅವರು, ಅಂಚೆ ಲಕೋಟೆಯ ಮೇಲೆ ಬಿಜೆಪಿ ಹಲಸೂರು ಘಟಕದ ಹೆಸರಿದ್ದರೂ ಇದು ಅವರ ಕೆಲಸವಲ್ಲ. ಸ್ಥಳೀಯರೇ ಈ ಕೆಲಸ ಮಾಡಿರುವ ಸಾಧ್ಯತೆಗಳಿವೆ. ಯಾವುದೇ ಬೆದರಿಕೆಗೆ ಜಗ್ಗುವುದಿಲ್ಲ. ಬೆದರಿಕೆ ಪತ್ರದ ಕುರಿತು ಮೇಲಾಧಿಕಾರಿಗಳು ಹಾಗೂ ಪೊಲೀಸರಿಗೆ ದೂರು ನೀಡಲಾಗುವುದು ಎಂದಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next